ರಾಷ್ಟ್ರಪತಿ ರಾಮ್'ನಾಥ್ ಕೋವಿಂದ್ 
ದೇಶ

26/11 ಮುಂಬೈ ದಾಳಿ ಸಂತ್ರಸ್ತರಿಗೆ ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್

26/11 ಮುಂಬೈ ಉಗ್ರ ದಾಳಿ ನಡೆದ 9 ವರ್ಷ ಕಳೆದಿದ್ದು, ದಾಳಿಯಲ್ಲಿ ಸಾವನ್ನಪ್ಪಿದ ಸಂತ್ರಸ್ತರಿಗೆ ರಾಷ್ಟ್ರಪತಿ ರಾಮ್'ನಾಥ್ ಕೋವಿಂದ್ ಅವರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ...

ನವದೆಹಲಿ: 26/11 ಮುಂಬೈ ಉಗ್ರ ದಾಳಿ ನಡೆದ 9 ವರ್ಷ ಕಳೆದಿದ್ದು, ದಾಳಿಯಲ್ಲಿ ಸಾವನ್ನಪ್ಪಿದ ಸಂತ್ರಸ್ತರಿಗೆ ರಾಷ್ಟ್ರಪತಿ ರಾಮ್'ನಾಥ್ ಕೋವಿಂದ್ ಅವರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 
ಮುಂಬೈ ದಾಳಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಭಯೋತ್ಪಾದನೆ ಯಾವುದೇ ರೂಪದಲ್ಲಿದ್ದರೂ ಅದನ್ನು ತೊಡೆದು ಹಾಕಲು, ಅದನ್ನು ಸೋಲಿಸಲು ಜನರು ಪಣತೊಡಬೇಕಿದೆ ಎಂದು ಹೇಳಿದ್ದಾರೆ. 
ಮುಂಬೈ ಉಗ್ರರ ದಾಳಿ ನಡೆದು ಇಂದಿಗೆ 9 ವರ್ಷಗಳು ಕಳೆದಿದ್ದು, ಈ ಕರಾಳ ದಿನದಂದು ದಾಳಿಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡವರಿಗಾಗಿ ಸಂತಾಪವನ್ನು ಸೂಚಿಸುತ್ತೇವೆ. ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರ ಯೋಧರಿಗೆ ಗೌರವಗಳನ್ನು ಸಮರ್ಪಿಸುತ್ತೇವೆಂದು ತಿಳಿಸಿದ್ದಾರೆ. 
ಭಯೋತ್ಪಾದನೆ ಯಾವುದೇ ರೂಪದಲ್ಲಿದ್ದರೂ ಅದನ್ನು ಸೋಲಿಸಲು ಹಾಗೂ ತೊಡೆದು ಹಾಕಲು ನಾವು ಪಣತೊಡಬೇಕಿದೆ. ನಮ್ಮ ಜನರು, ನಮ್ಮ ದೇಶ ಹಾಗೂ ನಮ್ಮ ಜಗತ್ತು ಸುರಕ್ಷಿತವಾಗಿರುವಂತೆ ಮಾಡಬೇಕಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT