ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸೋಮವಾರ 15 ಅಭ್ಯರ್ಥಿಗಳನ್ನೊಳಗೊಂಡ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಇಂದು ಪತ್ರಿಕಾ ಪ್ರಕಟಣೆಯಲ್ಲಿ 15 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದು, ಎರಡು ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.
ಕಳೆದ ಭಾನುವಾರ ಕಾಂಗ್ರೆಸ್ 76 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅಲ್ಲದೆ ಇದಕ್ಕು ಮುನ್ನ ನವೆಂಬರ್ 21ರಂದು 13 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪಕ್ಷ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಬಿಡುಗಡೆ ಮಾಡಿದ್ದರು.
ಗುಜರಾತ್ 182 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್ 9 ಮೊದಲ ಹಂತದ ಮತದಾನ ಹಾಗೂ ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics