ಪದ್ಮಾವತಿ 
ದೇಶ

ಸಿಬಿಎಫ್ ಸಿ ಅಂಗಳದಲ್ಲಿರುವ ಸಿನಿಮಾ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರ ಟೀಕೆ ಸಲ್ಲ: ಸುಪ್ರೀಂ ಕೋರ್ಟ್

ತೀವ್ರ ವಿವಾದಕ್ಕೆ ಗುರಿಯಾಗಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್...

ನವದೆಹಲಿ: ತೀವ್ರ ವಿವಾದಕ್ಕೆ ಗುರಿಯಾಗಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಸೆನ್ಸಾರ್ ಮಂಡಳಿಯ ಅಂಗಳದಲ್ಲಿರುವ ಸಿನಿಮಾ ಬಗ್ಗೆ ರಾಜಕಾರಣಿಗಳು ಟೀಕೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದೆ.
ಚಿತ್ರ ಬಿಡುಗಡೆಗೂ ಮುನ್ನವೇ ಹೇಳಿಕೆ ನೀಡುತ್ತಿರುವ ಸಾರ್ವಜನಿಕ ಹುದ್ದೆಯಲ್ಲಿರುವವರನ್ನೂ ತರಾಟೆಗೆ ತೆಗೆದುಕೊಂಡಿರುವ ಕೋರ್ಟ್, ವಿಷಯ ಇನ್ನೂ ಸೆನ್ಸಾರ್ ಮಂಡಳಿಯ ಅಂಗಳದಲ್ಲಿಯೇ ಇರಬೇಕಾದರೆ ಸಾರ್ವಜನಿಕ ಹುದ್ದೆಯಲ್ಲಿರುವವರು ಚಿತ್ರಕ್ಕೆ ಪ್ರಮಾಣ ಪತ್ರ ನೀಡುವುದರ ಬಗ್ಗೆ ಹೇಗೆ ಮಾತನಾಡಲು ಸಾಧ್ಯ ಎಂದು ಪ್ರಶ್ನಿಸಿದೆ.
ಪದ್ಮಾವತಿ ಚಿತ್ರದ ಬಿಡುಗಡೆಗೂ ಮುನ್ನವೇ ಅಭಿಪ್ರಾಯ ವ್ಯಕ್ತಪಡಿಸದಂತೆ ರಾಜಕಾರಣಿಗಳಿಗೆ ಸೂಚನೆ ನೀಡಲಾಗಿದ್ದು, ಚಿತ್ರ ಬಿಡುಗಡೆಗೂ ಮುನ್ನವೇ ಅಭಿಪ್ರಾಯ ವ್ಯಕ್ತಪಡಿಸಿ ಹೇಳಿಕೆ ನೀಡುವುದು ಸರಿಯಲ್ಲ ಇನ್ನೂ ಸೆನ್ಸಾರ್ ಬೋರ್ಡ್ ನಿಂದ ಚಿತ್ರ ಪ್ರಮಾಣೀಕೃತಗೊಳ್ಳಬೇಕಿದೆ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. 
ಪದ್ಮಾವತಿ ಚಿತ್ರದ ನಿರ್ದಿಷ್ಟ ತುಣುಕುಗಳಿಗೆ ಕತ್ತರಿ ಹಾಕಬೇಕು ಅಲ್ಲಿಯವರೆಗೆ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಮನೋಹರ್ ಲಾಲ್ ಶರ್ಮಾ ಎಂಬುವವರು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಪದ್ಮಾವತಿ ಚಿತ್ರಕ್ಕೆ ತಡೆ ನೀಡುವಂತೆ ಈಗಾಗಲೇ ಸಲ್ಲಿಕೆ ಮಾಡಲಾಗಿದ್ದ ಹಲವು ಅರ್ಜಿಗಳನ್ನು ಸುಪ್ರೀಂ ವಜಾಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!