ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರಪ್ರದೇಶ ರಾಜ್ಯದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್
ಲಖನೌ: 1990 ಆಯೋಧ್ಯೆ ಚಳುವಳಿ ವೇಳೆ ಕರಸೇವಕರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿದಂತೆ ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರಪ್ರದೇಶ ರಾಜ್ಯದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ.
1990ರ ಅಕ್ಟೋಬರ್ 30 ರಂದು ಅಯೋಧ್ಯೆಯತ್ತ ಪಾದಯಾತ್ರೆ ಹೊರಟಿದ್ದ ಕರಸೇವಕರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ವೇಳೆ 28 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು.
ಅಂದಿನ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಅವರು ತಮ್ಮ 79ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದರು.
ಗೋಲಿಬಾರ್ ನಲ್ಲಿ ರಮೇಶ್ ಕುಮಾರ್ ಪಾಂಡೆಯವರು ಮೃತಪಟ್ಟಿದ್ದರು. ರಮೇಶ್ ಅವರ ಪತ್ನಿ ಗಾಯತ್ರಿ ದೇವಿ ಎಂಬುವವರು ಮುಲಾಯಂ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆಯಲ್ಲಿ ನಾನು ನನ್ನ ಪತಿಯನ್ನು ಕಳೆದುಕೊಂಡಿದ್ದಾರೆ. ಆದರೆ, ಗೋಲಿಬಾರ್ ಆದೇಶವನ್ನು ಯಾರು ನೀಡಿದ್ದರು ಎಂಬುದರ ಬಗ್ಗೆ ನನಗೆ ಮಾಹಿತಿಯಿರಲಿಲ್ಲ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos