ಇ ಚಂದ್ರಶೇಖರನ್ ನಾಯರ್ (ಬಲಗಡೆ) 
ದೇಶ

ಸಿಪಿಐ ಹಿರಿಯ ನಾಯಕ, ಮಾಜಿ ಸಚಿವ ಚಂದ್ರಶೇಖರನ್ ನಾಯರ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ ಹಿರಿಯ ನಾಯಕ ಹಾಗೂ ಮೂರು ಬಾರಿ ಸಚಿವರಾಗಿದ್ದ ಇ ಚಂದ್ರಶೇಖರನ್ ನಾಯರ್....

ತಿರುವನಂತಪುರಂ: ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ ಹಿರಿಯ ನಾಯಕ ಹಾಗೂ ಮೂರು ಬಾರಿ ಸಚಿವರಾಗಿದ್ದ ಇ ಚಂದ್ರಶೇಖರನ್ ನಾಯರ್ ಅವರು ಬುಧವಾರ ಶ್ರೀ ಚಿತ್ರಾ ತಿರುನಲ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾಗಿದ್ದಾರೆ.
89 ವರ್ಷದ ಚಂದ್ರಶೇಖರನ್ ನಾಯರ್ ಅವರು, ಕೊವ್ಡಿಯಾರ್ ನಲ್ಲಿ ನಿವೃತ್ತಿ ಜೀವನ ನಡೆಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ ನಾಯಕನನ್ನು ಶ್ರೀ ಚಿತ್ರಾ ತಿರುನಲ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಶಾಂತಿ ಕವಡಂನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಜನವರಿ 25, 1980ರಿಂದ ಅಕ್ಟೋಬರ್ 20, 1981ರ ವರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದರು. 1987ರಲ್ಲಿ ಮತ್ತೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದರು. ಅಲ್ಲದೆ 1996ರಿಂದ 2001ರ ವರೆಗೆ ಆಹಾರ ಮತ್ತು ಪ್ರವಾಸೋದ್ಯಮ ಸಚಿವರಾಗಿ ಚಂದ್ರಶೇಖರನ್ ಅವರು ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!