ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೊಪಾರ್ಡಿ 'ಹತ್ಯಾಚಾರ' ಪ್ರಕರಣ: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಮಹಾರಾಷ್ಟ್ರದ ಕೊಪಾರ್ಡಿ ಹತ್ಯಾಚಾರ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಪ್ರಕರಣ ಮೂವರು ಅಪರಾಧಿಗಳಿಗೆ ಅಹ್ಮದ್ ನಗರ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 29 Nov 2017, 12:31 pm
ಅಹ್ಮದ್ ನಗರ: ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಮಹಾರಾಷ್ಟ್ರದ ಕೊಪಾರ್ಡಿ ಹತ್ಯಾಚಾರ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಪ್ರಕರಣ ಮೂವರು ಅಪರಾಧಿಗಳಿಗೆ ಅಹ್ಮದ್ ನಗರ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಅಂದರೆ ನವೆಂಬರ್ 18ರಂದು ಪ್ರಕರಣದ ಮೂವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದ ನ್ಯಾಯಾಲಯ ಇಂದು ಅಂದರೆ ನವೆಂಬರ್ 29ರಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡುವುದಾಗಿ ಹೇಳಿತ್ತು.  ಇದೀಗ ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದು, ಮೂವರು ಆಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಮೂವರು ಅಪರಾಧಿಗಳಿಗೆ ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಮರಣ ದಂಡನೆಯ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದು,  ಹೆಚ್ಚುವರಿ ವಿಶೇಷ ನ್ಯಾಯಾಧೀಶರಾದ ಸುವರ್ಣ ಕೇವಳೆ ಅವರು, ಅಪರಾಧಿಗಳಾದ ಜಿತೇಂದ್ರ ಬಾಬುಲಾಲ್‌ ಶಿಂಧೆ, ಸಂತೋಷ್‌ ಗೋರಖ್‌ ಭವಾಲ್‌ ಮತ್ತು ನಿತಿನ್‌ ಗೋಪೀನಾಥ್‌ ಭೈಲುಮೆ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. 
2016ರಲ್ಲಿ ಮಹಾರಾಷ್ಟ್ರದ ಕೊಪಾರ್ಡಿ ಗ್ರಾಮದಲ್ಲಿ  15ರ ಹರೆಯದ ಬಾಲಕಿಯ ಮೇಲೆ ಅತ್ಯಮಾನುಷ ರೀತಿಯಲ್ಲಿ ಅತ್ಯಾಚಾರವೆಸಗಿ ಆಕೆಯನ್ನು ಭೀಕರವಾಗಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣ ಸಂಬಂಧ ಮಹಾರಾಷ್ಟ್ರದಲ್ಲಿ  ವ್ಯಾಪಕ ಪ್ರತಿಭಟನೆ ಭುಗಿಲೆದ್ದಿತ್ತು. ಮರಾಠ ಸಮುದಾಯದವರು ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗೆ ಇಳಿದಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement