ಲೈಂಗಿಕ ಕಿರುಕುಳ 
ದೇಶ

ಮಧ್ಯಪ್ರದೇಶ: ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ, ಎಎಸ್‌ಪಿ ಬಂಧನ

ಮಧ್ಯಪ್ರದೇಶದಲ್ಲಿ ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರೊಬ್ಬರನ್ನು ಬಂಧಿಸಲಾಗಿದೆ...

ಭೋಪಾಲ್: ಮಧ್ಯಪ್ರದೇಶದಲ್ಲಿ ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರೊಬ್ಬರನ್ನು ಬಂಧಿಸಲಾಗಿದೆ. 
ಎಎಸ್‌ಪಿ ರಾಜೇಂದ್ರ ವರ್ಮಾ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಪೇದೆ ದೂರು ನೀಡಿದ್ದು ಈ ದೂರಿನ ಹಿನ್ನೆಲೆಯಲ್ಲಿ ಎಎಸ್‌ಪಿಯನ್ನು ಬಂಧಿಸಲಾಗಿದ್ದು ಗುರುವಾರ ಸಂಜೆ ಕೋರ್ಟ್ ಮುಂದೆ ಹಾಜರುಪಡಿಸುವುದಾಗಿ ಪೊಲೀಸ್ ಅಧಿಕಾರಿ ಧರ್ಮವೀರ ಸಿಂಗ್ ಯಾದವ್ ತಿಳಿಸಿದ್ದಾರೆ. 
ಈ ಸಂಬಂಧ ಸಂತ್ರಸ್ತ ಮಹಿಳೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವನ್ನು ಭೇಟಿ ಮಾಡಲು ಅವಕಾಶ ನೀಡದಕ್ಕೆ ಮಾಧ್ಯಮಗಳ ಮುಂದೆ ತನ್ನ ಅಳಲನ್ನು ತೊಡಿಕೊಂಡಿದ್ದರು. ಕಳೆದ ಮೂರು ತಿಂಗಳಿನಿಂದ ಎಎಸ್‌ಪಿ ನನ್ನ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದರು. ತನ್ನ ಜತೆ ಎಎಸ್‌ಪಿ ಅಸಭ್ಯವಾಗಿ ಮಾತನಾಡಿರುವುದನ್ನು ಸಂತ್ರಸ್ತ ಮಹಿಳೆ ವಿಡಿಯೋ ಮಾಡಿದ್ದು ಅದನ್ನು ಪೊಲೀಸ್ ಆಂತರಿಕ ಸಮಿತಿಗೆ ನೀಡಿದ್ದಳು. 
ಇತ್ತೀಚಿನ ವಾರಗಳಲ್ಲಿ ಮಧ್ಯಪ್ರದೇಶದಲ್ಲಿ ಪೊಲೀಸರ ವಿರುದ್ಧ ವರದಿಯಾಗಿರುವ ಮೂರನೇ ಲೈಂಗಿಕ ಕಿರುಕುಳ ಪ್ರಕರಣ ಇದಾಗಿದೆ. ಈ ಹಿಂದೆ ಉಪ ಪೊಲೀಸ್ ಅಧೀಕ್ಷಕ ಪವನ್ ಮಿಶ್ರಾ ಅವರು ಮದುವೆಯಾಗುವುದಾಗಿ ಮಹಿಳೆಯೊಂದಿಗೆ ಸಹಜೀವನ ನಡೆಸಿ ನಂತರ ವಂಚನೆ ಮಾಡಿದ್ದು ಈ ಸಂಬಂಧ ಪ್ರಕರಣ ವರದಿಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ