ನವದೆಹಲಿ: ಹೋಟೆಲ್ ಗಳಲ್ಲಿ ಟಿವಿಗಳನ್ನು ಕಳ್ಳತನ ಮಾಡುತ್ತಿದ್ದ ಅಸಾಧ್ಯ ಚೋರನೊಬ್ಬನನ್ನು ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ವಾಸುದೇವ್ ನಾನಯ್ಯ ಬಂಧಿತ ವ್ಯಕ್ತಿಯಾಗಿದ್ದಾನೆ. ದಕ್ಷಿಣ ಭಾರತದ ವಿವಿಧ ರಾಜ್ಯಗಳಿಗೆ ತೆರಳುತ್ತಿದ್ದ ಆರೋಪಿ ದೊಡ್ಡ ದೊಡ್ಡ ಹೋಟೆಲ್ ಗಳ ರೂಮ್ ಗಳನ್ನು ಬುಕ್ ಮಾಡುತ್ತಿದ್ದ. ಕೊಠಡಿ ಖಾಲಿ ಮಾಡುವ ವೇಳೆ ಟಿವಿಗಳನ್ನು ಕಳ್ಳತನ ಮಾಡಿ ಸ್ಥಳದಿಂದ ಪರಾರಿಯಾಗುತ್ತಿದ್ದ.
ಟಿವಿಗಳು ಬ್ಯಾಗ್ ಒಳಗೆ ಹಾಕಲು ಸಾಧ್ಯವಾಗದಿದ್ದರೆ ಮಾರುಕಟ್ಟೆಗೆ ತೆರಳುತ್ತಿದ್ದ ಆರೋಪಿ ದೊಡ್ಡ ಬ್ಯಾಗ್ ಗಳನ್ನು ತೆಗೆದುಕೊಂಡು ಟಿವಿ ಹಾಕಿಕೊಂಡು ಕೊಠಡಿ ಖಾಲಿ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಹೋಟೆಲ್ ಸಿಬ್ಬಂದಿಗಳೊಂದಿಗೆ ಉತ್ತಮವಾಗಿ ವರ್ತಿಸುತ್ತಿದ್ದ ನಾನಯ್ಯ ಅನುಮಾನ ಬರದಂತೆ ನೋಡಿಕೊಳ್ಳುತ್ತಿದ್ದ. ರೂಮ್ ಗಳನ್ನು ಬುಕ್ ಮಾಡುವ ಸಂದರ್ಭದಲ್ಲಿ ಸಣ್ಣ ಮೊತ್ತವನ್ನು ನೀಡುತ್ತಿದ್ದ ನಾನಯ್ಯ ಬಹಳಷ್ಟು ದಿನಗಳು ಇರುತ್ತೇನೆಂದು ಹೇಳುತ್ತಿದ್ದ. ಆದರೆ, ತನ್ನ ಕೆಲಸ ಮುಗಿಯುತ್ತಿದ್ದಂತೆಯೇ ಶೀಘ್ರಗತಿಯಲ್ಲಿ ಕೊಠಡಿ ಖಾಲಿ ಮಾಡುತ್ತಿದ್ದ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ ಚೇತನ್ ಸಿಂಗ್ ರಾಥೋಡ್ ಅವರು ತಿಳಿಸಿದ್ದಾರೆ.
ಅಂಗಡಿಯೊಬ್ಬರಿಗೆ ಟಿವಿ ಗಳನ್ನು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಆರೋಪಿಯಿಂದ ಕಳ್ಳತನ ಮಾಡಿದ್ದ 20 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ 24ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದವೆ. ಕಳೆದ ನಾಲ್ಕು ತಿಂಗಳಿನಲ್ಲಿ 100 ಟಿವಿಗಳನ್ನು ಕಳ್ಳತನ ಮಾಡಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.
ಯಾವುದೇ ಶ್ರಮವಿಲ್ಲದೆ, ಅತ್ಯಂತ ಸುಲಭವಾಗಿ ಕದಿಯಬಹುದ್ದಾದ್ದರಿಂಗ ಟಿವಿಗಳನ್ನು ಕಳ್ಳತನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ನಾನಯ್ಯ ಹೇಳಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics