ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ ದೇಶದ ಅತ್ಯಂತ ಅಪಾಯಕಾರಿ ರಾಜ್ಯ: ಎನ್ ಸಿ ಆರ್ ಡಿ ಅಂಕಿಅಂಶ

ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಭಾರತದ ಅತ್ಯಂತ ಅಪಾಯಕಾರಿ ರಾಜ್ಯ ಎಂದು ರಾಷ್ಟ್ರೀಯ ಅಪರಾಧ ದಾಖಲೆ....

ನವದೆಹಲಿ: ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಭಾರತದ ಅತ್ಯಂತ ಅಪಾಯಕಾರಿ ರಾಜ್ಯ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಮಂಡಳಿ(ಎನ್ ಸಿ ಆರ್ ಬಿ) ಗುರುವಾರ ತಿಳಿಸಿದೆ.
ಎನ್ ಸಿಆರ್ ಬಿ ದಾಖಲೆಗಳ ಪ್ರಕಾರ, 2016ರಲ್ಲಿ ಉತ್ತರ ಪ್ರದೇಶದಲ್ಲೇ ಕೊಲೆ ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಅತಿ ಹೆಚ್ಚು ಘೋರ ಅಪರಾಧಗಳು ನಡೆದಿವೆ. ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ 2016ರಲ್ಲಿ ಒಟ್ಟು 4,889 ಕೊಲೆ ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿರುವ ಬಿಹಾರದಲ್ಲಿ 2,581 ಕೊಲೆ ಪ್ರಕರಣಗಳು ದಾಖಲಾಗಿವೆ.
ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಶೇ. 14.5ರಷ್ಟು(49,262 ಪ್ರಕರಣ)ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಶೇ.9.6ರಷ್ಟು(32,513) ಪ್ರಕರಣಗಳು ದಾಖಲಾಗಿವೆ.
ಇನ್ನು ಯೋಗಿಯ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಶೇ.12.4ರಷ್ಟು ಹೆಚ್ಚಾಗಿದ್ದು, 2015ರಲ್ಲಿ 34,615 ಪ್ರಕರಣಗಳು ದಾಖಲಾಗಿದ್ದವು. ಆದರೆ 2016ರಲ್ಲಿ 38,947 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ