ನವದೆಹಲಿ: ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಒಂದು ವೇಳೆ ರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿರುವ ಉಭಯ ಪಕ್ಷಗಳು ಮಾತುಕತೆಗೆ ಮುಂದಾಗುವುದಾದರೆ ಅದಕ್ಕೆ ಅನುಕೂಲವಾಗುವ ವ್ಯವಸ್ಥೆಯನ್ನು ಕಲ್ಪಿಸಲು ಸಿದ್ಧ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ಕೋರ್ಟ್ ನಲ್ಲಿರುವ ರಾಮಜನ್ಮಭೂಮಿ ಪ್ರಕರಣದ ಭಾಗವಾಗಿಲ್ಲ, ಆದರೆ ಕೋರ್ಟ್ ಮೆಟ್ಟಿಲೇರಿರುವ ಉಭಯ ಪಕ್ಷಗಳು ಮಾತುಕತೆಗೆ ಮುಂದಾಗುವುದಾದರೆ ಅದಕ್ಕೆ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಲು ಸಿದ್ಧವಿದೆ, ವಿವಾದದ ಸಂಬಂಧ ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.