ಸಾಂದರ್ಭಿಕ ಚಿತ್ರ 
ದೇಶ

ಕೋಲ್ಕತಾ: ಶಾಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ, ಇಬ್ಬರು ಶಿಕ್ಷಕರ ಬಂಧನ

ಪ್ರತಿಷ್ಠಿತ ಶಾಲೆಯ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಶುಕ್ರವಾರ....

ಕೋಲ್ಕತಾ: ಪ್ರತಿಷ್ಠಿತ ಶಾಲೆಯ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಶುಕ್ರವಾರ ಕೋಲ್ಕತಾ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಕೋಲ್ಕತಾದ ರಾಣಿಕುತಿಯ ಪ್ರತಿಷ್ಠಿತ ಜಿಡಿ ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ ಶಾಲೆಯಲ್ಲಿ ಶಾಲಾ ಅವಧಿಯಲ್ಲೇ ಬಾಲಕಿಯನ್ನು ಟಾಯ್ಲೆಟ್‍ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನಡೆದಿತ್ತು.
ಬಾಲಕಿ ಸಮವಸ್ತ್ರದ ಮೇಲೆ ರಕ್ತದ ಕಲೆಗಳೊಂದಿಗೆ ಮನೆಗೆ ಹಿಂದಿರುಗಿದ್ದು, ಅಳುತ್ತಿದ್ದಳು. ಬಾಲಕಿಯ ಗುಪ್ತಾಂಗದಲ್ಲಿ ರಕ್ತಸ್ರಾವವಾಗುತ್ತಿರೋದನ್ನ ತಾಯಿ ನೋಡಿದ್ದರು. ಕೂಡಲೇ ಬಾಲಕಿಯನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವಾಗಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ.
ನಂತರ ಬಾಲಕಿ ನಡೆದ ಘಟನೆಯನ್ನ ಪೋಷಕರ ಬಳಿ ವಿವರಿಸಿದ್ದು, ಫೋಟೋದಿಂದ ದೈಹಿಕ ತರಬೇತಿ ಶಿಕ್ಷಕನನ್ನು ಗುರುತಿಸಿದ್ದಾಳೆ. ಆಕೆ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿದ್ದು, ಫಲಿತಾಂಶ ಹೊರಬರಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ಇಬ್ಬರು ಕಾಮುಕ ಶಿಕ್ಷಕರನ್ನು ಬಂಧಿಸಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಆಂತರಿಕ ತನಿಖೆಗೆ ಆದೇಶಿಸಿರುವುದಾಗಿ ಶಾಲಾ ಪ್ರಾಚಾರ್ಯ ಶರ್ಮಿಳಾ ನಾಥ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್