ಆರ್ಎಸ್ಎಸ್ 
ದೇಶ

ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಕಿ ಜತೆ ಆಟವಾಡುತ್ತಿದ್ದಾರೆ: ಆರ್ಎಸ್ಎಸ್

ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಟೀಕಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬೆಂಕಿ...

ಪಾಟ್ನಾ: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಟೀಕಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬೆಂಕಿ ಜತೆ ಆಟವಾಡುತ್ತಿದ್ದಾರೆ ಎಂದು ಆರ್ಎಸ್ಎಸ್ ಸಿದ್ಧಾಂತಜ್ಞ ರಾಕೇಶ್ ಸಿನ್ಹಾ ಕಿಡಿಕಾರಿದ್ದಾರೆ. 
ಮೋಹನ್ ಭಾಗವತ್ ಅವರು ತಮ್ಮ ಸಲಹೆ ಕೇರಳ ಸರ್ಕಾರದ ಚಟುವಟಿಕೆಯ ಬಗ್ಗೆ ಜಗತ್ತನ್ನು ಪ್ರಬುದ್ಧಗೊಳಿಸಿದ್ದಾರೆ. ಭಾಗವತ್ ಅವರ ಸಲಹೆಗಳನ್ನು ತೆಗೆದುಕೊಳ್ಳದೇ ಅವರನ್ನೇ ಟೀಕಿಸುವ ಮೂಲಕ ಪಿಣರಾಯಿ ವಿಜಯನ್ ಅವರು ಬೆಂಕಿ ಜತೆ ಆಟವಾಡುತ್ತಿದ್ದಾರೆ ಎಂದು ಹೇಳಿದರು. 
ಇದೇ ವೇಳೆ ಕೇರಳ ಸರ್ಕಾರ ಜಿಹಾದಿಗಳಿಗೆ ನೆಲೆಯನ್ನು ನೀಡುವ ಮೂಲಕ ಉಗ್ರವಾದಕ್ಕೆ ಬೆಂಬಲ ನೀಡುತ್ತಿದೆ. ಅಲ್ಲದೆ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ತಿರುಚುವ ಮೂಲಕ ಕೇರಳಿಗರ ಮನಸ್ಥಿತಿಯನ್ನು ಬದಲಿಸುತ್ತಿದ್ದಾರೆ ಎಂದು ಆರೋಪಿಸಿದರು. 
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕೇರಳ ಸರ್ಕಾರ ದೇಶ ದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಕೇರಳ ಸಿಎಂ ಪಿಣರಾಯಿ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿ ವಸಾಹತುಶಾಹಿ ಬ್ರಿಟೀಷರಿಗೆ ಸೇವೆ ಸಲ್ಲಿಸಿದ ಆರ್ಎಸ್ಎಸ್ ನಿಂದ ಕೇರಳಿಗರು ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ ಎಂದು ಕಿಡಿಕಾರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!