ಅಮೇಥಿಗೆ ಭೇಟಿ ನೀಡಲು ರಾಹುಲ್ ಗಾಂಧಿಗೆ ಅನುಮತಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಅಮೇಥಿ ಭೇಟಿಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಕ್ಕೆ ತೀವ್ರ ಆಕ್ಷೆಪ ವ್ಯಕ್ತವಾದ ಬೆನ್ನಲ್ಲೆ ಜಿಲ್ಲಾಡಳಿತ ರಾಹುಲ್ ಗಾಂಧಿ...
ಅಮೇಥಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಅಮೇಥಿ ಭೇಟಿಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಕ್ಕೆ ತೀವ್ರ ಆಕ್ಷೆಪ ವ್ಯಕ್ತವಾದ ಬೆನ್ನಲ್ಲೆ ಜಿಲ್ಲಾಡಳಿತ ರಾಹುಲ್ ಗಾಂಧಿ ಭೇಟಿಗೆ ಅನುಮತಿ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಮ್ಯಾನಿಸ್ಟ್ರೇಟ್, ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಹೇಳಿಲ್ಲ. ಆದರೆ ಭದ್ರತೆಯ ದೃಷ್ಟಿಯಿಂದ ರಾಹುಲ್ ಗಾಂಧಿಯವರ ನಿಗದಿತ ವೇಳಾಪಟ್ಟಿಯನ್ನು 24-48 ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಮೊಹರಂ ಹಾಗೂ ದುರ್ಗಾ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮಗಳಿದ್ದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗಳು ಕಾರ್ಯನಿರತರಾಗಿದ್ದಿದ್ದರಿಂದ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವುದು ಕಷ್ಟ ಸಾಧ್ಯವಾಗುತ್ತಿತ್ತು. ಆದ್ದರಿಂದ ಭೇಟಿಯನ್ನು ಮುಂದೂಡುವಂತೆ ಮನವಿ ಮಾಡಲಾಗಿತ್ತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿಕೆ ನೀಡಿದ್ದಾರೆ. ಅ.4 ರಿಂದ ರಾಹುಲ್ ಗಾಂಧಿ ಅಮೇಥಿ ಭೇಟಿ ನಿಗದಿಯಾಗಿದೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.