ತಾಜ್ ಮಹಲ್ 
ದೇಶ

ಉತ್ತರ ಪ್ರದೇಶ ಪ್ರವಾಸಿ ತಾಣಗಳ ಪಟ್ಟಿಯಿಂದ ತಾಜ್ ಮಹಲ್ ಕೈಬಿಟ್ಟ ಯೋಗಿ ಸರ್ಕಾರ

ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್‌ಗೆ ಉತ್ತರ ಪ್ರದೇಶ...

ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್‌ಗೆ ಉತ್ತರ ಪ್ರದೇಶ ಸರ್ಕಾರದ ಅಧಿಕೃತ ಪ್ರವಾಸಿ ಕೈಪಿಡಿಯಲ್ಲಿ ಜಾಗವೇ ಇಲ್ಲ.
ಉತ್ತರ ಪ್ರದೇಶ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿರುವ ಪ್ರವಾಸಿ ಕೈಪಿಡಿಯಿಂದ ತಾಜ್ ಮಹಲ್ ಅನ್ನು ತೆಗೆದು ಹಾಕಲಾಗಿದೆ. ಅದರ ಬದಲು ಮಥುರಾ, ಅಯೋಧ್ಯಾ ಮತ್ತು ಗೋರಖ್ ಪುರ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಇತ್ತೀಚಿಗಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ವಿದೇಶಿ ಪ್ರವಾಸಿಗರಿಗೆ ತಾಜ್ ಮಹಲ್ ಪ್ರತಿಕೃತಿಯನ್ನು ಕಾಣಿಯಾಗಿ ನೀಡುವುದನ್ನು ಟೀಕಿಸಿದ್ದರು. ತಾಜ್ ಮಹಲ್ ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುವುದಿಲ್ಲ ಎಂದು ಆದಿತ್ಯನಾಥ್ ಹೇಳಿರುವುದಾಗಿ ಟೆಲೆಗ್ರಾಫ್ ವರದಿ ಮಾಡಿತ್ತು.
ಉತ್ತರ ಪ್ರದೇಶ ಸರ್ಕಾರ ಪ್ರವಾಸಿ ತಾಣಗಳ ಪಟ್ಟಿಯಿಂದ ತಾಜ್ ಮಹಲ್ ಅನ್ನು ಕೈಬಿಟ್ಟಿರುವುದಕ್ಕೆ ಸಾಮಾಜಿ ತಾಣ ಸೇರಿದಂತೆ ಇತಿಹಾಸಕಾರರ, ಶಿಕ್ಷಣ ತಜ್ಞರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದೇಶದ ಬಹು ಸಂಸ್ಕೃತಿಯನ್ನು ಪ್ರಚಾರ ಮಾಡದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್