ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್ ಹುತಾತ್ಮ

Manjula VN
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಓರ್ವ ಪೊಲೀಸ್ ಪೇದೆ ಹುತಾತ್ಮನಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. 
ಆಶಿಕ್ ಅಹ್ಮದ್ ಹುತಾತ್ಮರಾದ ಪೊಲೀಸ್ ಪೇದೆಯಾಗಿದ್ದಾರೆ. ಮುನ್ಶಿ ಪ್ರದೇಶದಲ್ಲಿರುವ ಪೊಲೀಸ್ ಠಾಣೆಯಲ್ಲಿ ಅಹ್ಮದ್ ಅವರು ಕಾರ್ಯನಿರ್ವಹಿಸುತ್ತಿದ್ದರು. 
ಅವಂತಿಪೊರದಲ್ಲಿರುವ ಪದ್ಗಮ್ಪೊರಾದಲ್ಲಿ ನಡೆಯುತ್ತಿದ್ದ ಸಂಬಂಧಿಕರೊಬ್ಬರ ಮದುವೆಯನ್ನು ಮುಗಿಸಿಕೊಂಡು ಅಹ್ಮದ್ ಅವರು ವಾಪಸ್ಸಾಗುತ್ತಿದ್ದರು. ಈ ವೇಳೆ ದಾಳಿ ಮಧ್ಯೆ ಬಂದಿರುವ ಉಗ್ರರು ಅಹ್ಮದ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 
ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಶಿಕ್ ಅಹ್ಮದ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಅಹ್ಮದ್ ಅವರು ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 
SCROLL FOR NEXT