ಫೈಲ್ ಚಿತ್ರ 
ದೇಶ

ಕೇರಳ: ಶಂಕಿತ ಸಿಪಿಐ(ಎಂ) ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮೂವರು ಶಂಕಿತ ಸಿಪಿಐ(ಎಂ) ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ  ಮೂವರು ಶಂಕಿತ ಸಿಪಿಐ(ಎಂ) ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಈ ಹಲ್ಲೆ ನಡೆದಿದ್ದು ಇಂದು ಕೇಸರಿ ಪಕ್ಷವು 'ಜನ ರಕ್ಷಾ ಯಾತ್ರಾ' ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಿದೆ.
ಬಿಜೆಪಿ ಕಾರ್ಯಕರ್ತರು 15 ದಿನದ ಜಾಥಾಗಾಗಿ ರಾಷ್ಟ್ರೀಯ ಹೆದ್ದಾರಿ-66ನ್ನು ಅಲಂಕರಿಸುತ್ತಿದ್ದಾಗ ರಾತ್ರಿ 9:30 ರ ವೇಳೆಗೆ ಈ ಘಟನೆ ನಡೆದಿದೆ. ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಜಾಥಾವನ್ನು ಇದನ್ನು ಪ್ರಾರಂಭಿಸಲಿದ್ದಾರೆ.
ಗಾಯಗೊಂಡ ಮೂವರು ಕಾರ್ಯಕರ್ತರಿಗೆ ನೀಲೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀದಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನೇತೃತ್ವದಲ್ಲಿ ನೀಲೇಶ್ವರ ಮಾರುಕಟ್ಟೆ, ರಸ್ತೆಗಳ ಬದಿ ಅಲಂಕರಿಸುತ್ತಿದ್ದಾಗ ಸುಮಾರು 20 ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಫ್ಲೆಕ್ಸ್ ಬೋರ್ಡ್ ಗಳು, ಟ್ಯೂಬ್ ಲೈಟುಗಳು ಮತ್ತು ದ್ವಿಚಕ್ರ ವಾಹನಗಳು ಘಟನೆಯಲ್ಲಿ ಹಾನಿಗೊಂಡಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯ ಪ್ರಭಾವ ಹೆಚ್ಚುತ್ತಿದ್ದು ಇದನ್ನು ಸಹಿಸದ ಸಿಪಿಐ (ಎಂ) ಕಾರ್ಯಕರ್ತರು ಈ ದಾಳಿಯಲ್ಲಿ ತೊಡಗಿದ್ದಾರೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT