ಲಾಲು ಪ್ರಸಾದ್ ಯಾದವ್ ಮತ್ತು ಪುತ್ರ ತೇಜಸ್ವಿ ಯಾದವ್ 
ದೇಶ

ರೈಲ್ವೇ ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ: ಲಾಲು, ತೇಜಸ್ವಿಗೆ ಮತ್ತೆ ಸಮನ್ಸ್ ಜಾರಿ ಮಾಡಿದ ಸಿಬಿಐ

ಲಾಲು ಪ್ರಸಾದ್ ಯಾದವ್ ಅವರು ರೈಲ್ವೇ ಸಚಿವರಾಗಿದ್ದಾಗ 2 ಹೋಟೆಲ್ ಗಳನ್ನು ಖಾಸಗಿಯವರಿಗೆ ನೀಡಿದ್ದರಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ಜಾರಿ ಮಾಡಿದೆ...

ನವದೆಹಲಿ: ಲಾಲು ಪ್ರಸಾದ್ ಯಾದವ್ ಅವರು ರೈಲ್ವೇ ಸಚಿವರಾಗಿದ್ದಾಗ 2 ಹೋಟೆಲ್ ಗಳನ್ನು ಖಾಸಗಿಯವರಿಗೆ ನೀಡಿದ್ದರಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ಜಾರಿ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. 

ಹೋಟೆಲ್ ಗುತ್ತಿಗೆ ಅಕ್ರಮವನ್ನು ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಿಬಿಐ ನ್ಯಾಯಾಲಯ ಈ ಹಿಂದೆ ಪ್ರಕರಣ ಸಂಬಂಧ ಸೆ.11-12 ರಂದು ವಿಚಾರಣೆಗೆ ಹಾಜರಾಗುವಂತೆ ಲಾಲೂ ಹಾಗೂ ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. 

ಸಿಬಿಐ ಸಮನ್ಸ್ ಜಾರಿ ಮಾಡಿದ್ದರೂ, ಲಾಲೂ ಹಾಗೂ ತೇಜಸ್ವಿ ಅವರು ವಿಚಾರಣೆ ಹಾಜರಾಗಿರಲಿಲ್ಲ. ಇದೀಗ ಮತ್ತೆ ಇಬ್ಬರಿಗೂ ಸಮನ್ಸ್ ಜಾರಿ ಮಾಡಿರುವ ಸಿಬಿಐ ನ್ಯಾಯಾಲಯ ಅಕ್ಟೋಬರ್. 4-5 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ. 

ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರು ರೈಲ್ವೇ ಸಚಿವರಾಗಿದ್ದಾಗ 2 ಹೋಟೆಲ್ ಗಳನ್ನು ಖಾಸಗಿಯವರಿಗೆ ನೀಡಿದ್ದರಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದಲ್ಲಿ ಲಾಲು, ಅವರ ಪತ್ನಿ ರಾಬ್ಡಿದೇವಿ ಮತ್ತು ಪುತ್ರ, ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಸಿಬಿಐ ಜುಲೈ.7ರಂದು ಪ್ರಕರಣ ದಾಖಲಿಸಿಕೊಂಡಿತ್ತು. 
ರಾಂಚಿ ಮತ್ತು ಪುರಿಯಲ್ಲಿರುವ ರೈಲ್ವೆಯ ಮಾಲೀಕತ್ವದ ಬಿಎನ್ಆರ್ ಹೋಟೆಲ್ ಗಳ ನಿಯಂತ್ರಣವನ್ನು ಹರ್ಷ ಕೊಚಾರ್ ಅವರ ಮಾಲೀಕತ್ವದ ಸುಜಾತಾ ಹೋಟೆಲ್ ಪ್ರೈವೇಟ್ ಲಿಮಿಟೆಡ್ (ಎಸ್ಎಚ್'ಪಿಎಲ್) ಎಂಬ ಕಂಪನಿಗೆ ನೀಡುವುದಕ್ಕಾಗಿ ಲಾಲು ಅವರು ಇತರರ ಜತೆ ಸೇರಿ ಷಡ್ಯಂತ್ರ ಮಾಡಿದ್ದಾರೆ. ಹೋಟೆಲ್ ಗಳನ್ನು ಗುತ್ತಿಗೆ ನೀಡಿದ್ದಕ್ಕೆ ಪ್ರತಿಯಾಗಿ ಪಾಟ್ನದಲ್ಲಿ 3ಎಕರೆ ಸ್ಥಳ ಪಡೆದುಕೊಂಡಿದ್ದಾರೆ. 

ಈಗ ರೂ.94 ಕೋಟಿ ಬೆಲೆ ಬಾಳುವ ಸ್ಥಳವನ್ನು ಮೊದಲಿಗೆ ಲಾಲೂ ಅವರ ಆಪ್ತ ಪ್ರೇಮ್ ಚಂದ್ ಗುಪ್ತಾ ಅವರ ಹೆಂಡತಿ ಸರಳಾ ಅವರು ನಿರ್ದೇಶಕರಾಗಿದ್ದ ಡಿಲೈಟ್ ಮಾರ್ಕೆಟಿಂಗ್ ಪ್ರೈ.ಲಿ (ಡಿಎಂಪಿಎಲ್) ಸಂಸ್ಥೆಗೆ ರೂ.1.47 ಕೋಟಿಗೆ ನೀಡಲಾಗಿತ್ತು. ಈ ಹಣವನ್ನು ರಹಸ್ಯವಾಗಿ ಷೇರುಗಳ ರೂಪದಲ್ಲಿ ಪಾವತಿ ಮಾಡಲಾಗಿತ್ತು. ಈ ಮಾರಾಟ 2005ರ ಫೆ.5 ರಂದು ನಡೆದಿತ್ತು. ಪುರಿ ಮತ್ತು ರಾಂಚಿಯ ಹೋಟೆಲ್ ಗಳನ್ನು ಕೊಚಾರ್ ಅವರಿಗೆ 15 ವರ್ಷದ ಅವಧಿಗೆ ಗುತ್ತಿಗೆಗೆ ನಿರ್ಧಾರವನ್ನೂ ಅದೇ ದಿನ ಕೈಗೊಳ್ಳಲಾಗಿದೆ. 

ಲಾಲೂ ಪ್ರಸಾದ್ ಅವರು ಸಚಿವ ಸ್ಥಾನದಿಂದ ಕೆಳಗೆ ಇಳಿದ ಬಳಿಕ 2010ರಿಂದ 14ರ ಅವಧಿಯಲ್ಲಿ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿಯವರ ಮಾಲೀಕತ್ವದ ಲಾರಾ ಪ್ರೊಜೆಕ್ಟ್ಸ್'ಗೆ ಡಿಎಂಪಿಎಲ್ ಷೇರುಗಳನ್ನು ವರ್ಗಾಯಿಸಿತು. ರೂ.32.5 ಕೋಟಿ ಮೌಲ್ಯದ ಡಿಎಂಸಿಎಲ್ ಕಂಪನಿಯ ಶೇರುಗಳನ್ನು ಕೇವಲ ರೂ.64 ಲಕ್ಷಕ್ಕೆ ಲಾರಾ ಪ್ರೋಜೆಕ್ಟ್ಸ್'ಗೆ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT