ಉತ್ತರಪ್ರದೇಶ ವಿಧಾನಸಭೆಯಲ್ಲಿ ಬಾಂಬ್: ಹುಸಿ ಕರೆ ಮಾಡಿದ ವ್ಯಕ್ತಿ ಬಂಧನ
ಉತ್ತರಪ್ರದೇಶ ರಾಜ್ಯದ ವಿಧಾನಸಭೆಯಲ್ಲಿ ಬಾಂಬ್ ಇರಿಸಿರುವುದಾಗಿ ಹುಸಿ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...
ಲಖನೌ: ಉತ್ತರಪ್ರದೇಶ ರಾಜ್ಯದ ವಿಧಾನಸಭೆಯಲ್ಲಿ ಬಾಂಬ್ ಇರಿಸಿರುವುದಾಗಿ ಹುಸಿ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ನರ್ಸಿನ್ಹ್ ಬಂಧತ ವ್ಯಕ್ತಿಯೆಂದು ಗುರ್ತಿಸಲಾಗಿದೆ. ಆರೋಪಿ ಶಹಜಹಾನ್ಪುರ್ ಜಿಲ್ಲೆಯ ಬಬ್ರಾ ಗ್ರಾಮದ ನಿವಾಸಿಯಾಗಿದ್ದಾನೆ.
ಕಳೆದ ಭಾನುವಾರ ಉತ್ತರಪ್ರದೇಶ ರಾಜ್ಯ ವಿಧಾನಸಭೆಯಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದ. ಕೂಡಲೇ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು. ಶೋಧ ಕಾರ್ಯಾಚರಣೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿತ್ತು. ಬಳಿಕ ಆರೋಪಿಗಾಗಿ ಪೊಲೀಸರು ಹುಡುಕಾಟ ಅರಂಭಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.