ದೇಶ

ಬಿಹಾರ ನೂತನ ರಾಜ್ಯಪಾಲರಾಗಿ ಸತ್ಯಪಾಲ್ ಮಲ್ಲಿಕ್ ಪ್ರಮಾಣ ವಚನ ಸ್ವೀಕಾರ

Manjula VN
ಪಾಟ್ನಾ: ಬಿಹಾರ ರಾಜ್ಯದ ನೂತನ ರಾಜ್ಯಪಾಲರಾಗಿ ಬಿಜೆಪಿ ಹಿರಿಯ ನಾಯಕ ಸತ್ಯಪಾಲ್ ಮಲ್ಲಿಕ್ ಅವರು ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 
ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸತ್ಯಪಾಲ್ ಅವರಿಗೆ ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರಾಜೇಂದ್ರ ಮೆನನ್ ಅವರು ಪ್ರಮಾಣ ವಚನ ಬೋಧಿಸಿದರು. 
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ಬಿಹಾರ ರಾಜ್ಯ ವಿಧಾನಸಭೆ ಸ್ಪೀಕರ್ ವಿಜಯ್ ಚೌಧರಿ ಮತ್ತು ವಿಧಾನ ಪರಿಷತ್ ಅಧ್ಯಕ್ಷ ಅವಧೇಶ್ ನಾರಾಯಣ್ ಸಿಂಗ್ ಅವರು ಹಾಜರಿದ್ದರು. 
ಪ್ರಮಾಣವಚನ ಸ್ವೀಕಾರದ ಬಳಿಕ ಮಾತನಾಡಿರುವ ಸತ್ಯಪಾಲ್ ಅವರು, ಬಹಳ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸತ್ತೇನೆಂದು ಹೇಳಿದ್ದಾರೆ. 
ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಬಿಹಾರ ರಾಜ್ಯಪಾಲ ಸ್ಥಾನ ತೆರವಾಗಿತ್ತು. ಇದೀಗ ಈ ಸ್ಥಾನಕ್ಕೆ ಸತ್ಯಪಾಲ್ ಮಲ್ಲಿಕ್ ಅವರು ನೇಮಕಗೊಂಡಿದ್ದಾರೆ. ಈ ಮೊದಲು ಪಶ್ಚಿಮ ಬಂಗಾಳದ ರಾಜ್ಯಪಾಲ ಕೆ.ಎನ್. ತ್ರಿಪಾಠಿಯವರು ತಾತ್ಕಾಲಿಕವಾಗಿ ಬಿಹಾರ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 
ಮೀರತ್ ವಿಶ್ವವಿದ್ಯಾಲಯದಲ್ಲಿ ಬಿಎಸ್'ಸಿ ಮತ್ತು ಎಲ್ಎಲ್'ಬಿ ಪದವಿ ಪಡೆದಿದ್ದಾರೆ. ಸಂವಿಧಾನ ವಿಷಯದಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿದ್ದಾರೆ. ಸತ್ಯಪಾಲ್ ಮಲ್ಲಿಕ್ ಅವರು 1974ರಿಂದ 1977ರವರೆಗೆ ಶಾಸಕರಾಗಿ, 1989ರಿಂದ 1990ರವರೆಗೆ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ, ಅಲ್ಲದೆ, 2 ಹಾರಿ ರಾಜ್ಯಸಭೆಗೂ ಆಯ್ಕೆಯಾಗಿದ್ದರು. 
SCROLL FOR NEXT