ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮರು ಆಯ್ಕೆ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ...

ಅಖಿಲೇಶ್ ಯಾದವ್
Vishwanath S
Updated On : 5 Oct 2017, 1:34 am
ಆಗ್ರ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. 
ಇಂದು ನಡೆದ ಸಮಾಜವಾದಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅಖಿಲೇಶ್ ಯಾದವ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಕಾರ್ಯಕಾರಿಣಿ ಸಭೆಗೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಮುಲಾಯಂ ಅನುಪಸ್ಥಿತಿಯಲ್ಲೇ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. 
ಅಖಿಲೇಶ್ ಯಾದವ್ ಅವರು ಮುಂದಿನ ಐದು ವರ್ಷಗಳ ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಲಿದ್ದು 2019ರ ಲೋಕಸಭೆ ಚುನಾವಣೆ ಹಾಗೂ 2022ರ ವಿಧಾನಸಭಾ ಚುನಾವಣೆಯನ್ನು ಅಖಿಲೇಶ್ ಯಾದವ್ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments