ನಿರಾಶಾವಾದಿಗಳನ್ನು ದೂಷಿಸಬೇಡಿ, ನಿಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಿ: ಮೋದಿಗೆ ರಾಹುಲ್ ಗಾಂಧಿ
ತಮ್ಮ ಲೋಕಸಭಾ ಕ್ಷೇತ್ರ ಅಮೇಥಿಗೆ ಪ್ರವಾಸ ಕೈಗೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಮೇಥಿ: ತಮ್ಮ ಲೋಕಸಭಾ ಕ್ಷೇತ್ರ ಅಮೇಥಿಗೆ ಪ್ರವಾಸ ಕೈಗೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಲ್ಯ ವೃತ್ತಿಯಿಂದ (ನಿರಾಶಾದಾಯಕ ಮನಸ್ಥಿತಿ)ಯಿಂದ ಬಳಲುತ್ತಿರುತ್ತಾರೆ. ಅಂತಹವರು ನಿರಾಶಾವಾದದ ಭಾವನೆಯನ್ನು ಹರಡಿದ ನಂತರವಷ್ಟೇ ನೆಮ್ಮದಿಯಿಂದ ಇರುತ್ತಾರೆ ಎಂದು ಮೋದಿ ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ನಿರಾಶಾವಾದಿಗಳನ್ನು ದೂಷಿಸಬೇಡಿ, ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲಾಗದ ನಿಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಿ ಎಂದು ಹೇಳಿದ್ದಾರೆ.
ನಿರುದ್ಯೋಗ ಹಾಗೂ ಉದ್ಯೋಗ ಸೃಷ್ಟಿಯತ್ತ ಮೊದಲು ಗಮನ ಹರಿಸಬೇಕೆಂದು ವಿಪಕ್ಷ ನಾಯಕನಾಗಿ ಪ್ರಧಾನಿಗೆ ಸಲಹೆ ನೀಡುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಚೀನಾ ಪ್ರತಿದಿನಕ್ಕೆ 50,000 ನೌಕರಿಯನ್ನು ಸೃಷ್ಟಿಸುತ್ತದೆ. ಆದರೆ ನಾವು ನಮ್ಮ ಯುವಕರಿಗಾಗಿ ನೌಕರಿ ಸೃಷ್ಟಿ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾದಡಿಯಲ್ಲಿ 450 ಉದ್ಯೋಗಗಳಷ್ಟೇ ಸೃಷ್ಟಿಯಾಗುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.