ಭಾವನಾ ಕಾಂತ್, ಅವನಿ ಚತುರ್ವೇದಿ ಮತ್ತು ಮೋಹನ ಸಿಂಗ್ 
ದೇಶ

ಡಿಸೆಂಬರ್ ವೇಳೆಗೆ ವಾಯುಪಡೆಗೆ 3 ಮಹಿಳಾ ಯುದ್ಧ ವಿಮಾನ ಪೈಲಟ್ ಗಳು ಸೇರ್ಪಡೆ

ಈ ವರ್ಷಾಂತ್ಯಕ್ಕೆ ಭಾರತೀಯ ವಾಯುಪಡೆಗೆ ಮೂವರು ಮಹಿಳಾ ಯುದ್ಧ ವಿಮಾನ ಪೈಲಟ್ ಗಳು ಸೇರ್ಪಡೆಯಾಗಲಿದ್ದಾರೆ ...

ನವದೆಹಲಿ: ಈ ವರ್ಷಾಂತ್ಯಕ್ಕೆ ಭಾರತೀಯ ವಾಯುಪಡೆಗೆ ಮೂವರು ಮಹಿಳಾ ಯುದ್ಧ ವಿಮಾನ ಪೈಲಟ್ ಗಳು ಸೇರ್ಪಡೆಯಾಗಲಿದ್ದಾರೆ ಎಂದು ವಾಯುಪಡೆ ಮುಖ್ಯಸ್ಥ ಬಿಎಸ್ ಧನೊವಾ ತಿಳಿಸಿದ್ದಾರೆ. 
ಭಾವನಾ ಕಾಂತ್, ಅವನಿ ಚತುರ್ವೇದಿ ಮತ್ತು ಮೋಹನ ಸಿಂಗ್ ಭಾರತೀಯ ವಾಯುಪಡೆಯ ಮೊದಲ ಮಹಿಳಾ ಪೈಲಟ್ ಗಳಾಗಿದ್ದು ಇವರು ಸುಕೊಯ್ ಮತ್ತು ತೇಜಸ್ ನಂತಹ ಯುದ್ಧ ವಿಮಾನಗಳನ್ನು ಹಾರಿಸಲಿದ್ದಾರೆ ಎಂದು ಹೇಳಿದರು. ಇವರು ವಾಯುಪಡೆಗೆ ಕಳೆದ ವರ್ಷ ಸೇರ್ಪಡೆಯಾಗಿದ್ದರು. 
ಭಾವನಾ ಕಾಂತ್ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವೈದ್ಯಕೀಯ ಎಲೆಕ್ಟ್ರಾನಿಕ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಗಳಿಸಿದ್ದಾರೆ. ಶಾರ್ಟ್ ಸರ್ವಿಸ್ ಕಮಿಷನ್ ಪರೀಕ್ಷೆ ಮೂಲಕ ಅವರು ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದ್ದರು. ಕಾಲೇಜು ದಿನಗಳಲ್ಲಿ ಮಾಡೆಲಿಂಗ್ ನಲ್ಲಿ ಕೂಡ ಅವರಿಗೆ ಒಲವಿತ್ತು.
ಅವನಿ ಚತುರ್ವೇದಿ ಮಧ್ಯ ಪ್ರದೇಶದ ಸಾತ್ನದವರಾಗಿದ್ದು ಜೈಪುರದ ಬನಸ್ತಾಲಿ ವಿಶ್ವ ವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಬಿ.ಟೆಕ್ ಪದವಿ ಪೂರೈಸಿದ್ದಾರೆ.
ಮೋಹನ ಸಿಂಗ್ ರಾಜಸ್ತಾನದ ಜುಂಜುನು ಜಿಲ್ಲೆಯವರು. ಅವರು ಅಮೃತಸರದ ಗ್ಲೋಬಲ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಅಂಡ್ ಎಮರ್ಜೆಂಗ್ ಟೆಕ್ನಾಲಜಿಸ್ ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ನಲ್ಲಿ ಬಿ.ಟೆಕ್ ಪದವಿ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!