ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಶಂಕಿತ ಉಗ್ರರು ಮಾಜಿ ಉಗ್ರನನ್ನು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಮಾಜಿ ಉಗ್ರ ರಫಿಕ್ ಅಹಮ್ಮದ್ ಅಲಿಯಾಸ್ ದಾದಾ ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಾದಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದಾರಿ ಮಧ್ಯೆಯೇ ಮಾಜಿ ಉಗ್ರ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.