ಶ್ರೀನಗರ: ಕಳೆದೊಂದು ವಾರದಿಂದ ಪಾಕಿಸ್ತಾನ ಸೇನೆ ನಡೆಸುತ್ತಿರುವ ಗುಂಡಿನ ದಾಳಿ ತೀವ್ರಗೊಂಡಿದ್ದು, ಶುಕ್ರವಾರ ಮುಂಜಾನೆ ಮತ್ತೆ ಪಾಕಿಸ್ತಾನಿ ಸೈನಿಕರು ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.
ಕಾಶ್ಮೀರದ ಇಂಡೋ-ಪಾಕ್ ಗಡಿ ನಿಯಂತ್ರಣ ರೇಖೆ ಪೂಂಛ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸುತ್ತಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಕೂಡ ಪ್ರತಿ ದಾಳಿ ನಡೆಸುತ್ತಿದ್ದಾರೆ. ಇದೇ ಮಂಗಳವಾರ ಇದೇ ಪೂಂಛ್ ಸೆಕ್ಟರ್ ನಲ್ಲಿ ಪಾಕಿಸ್ತಾನದ ಸ್ನೈಪರ್ ಯೋಧ ಸಿಡಿಸಿದ ಗುಂಡಿಗೆ ಭಾರತೀಯ ಯೋಧನೋರ್ವ ಸಾವನ್ನಪ್ಪಿದ್ದ.
ಇನ್ನು ಕಳೆದ ಅಕ್ಟೋಬರ್ 2ರಂದು ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಪೂಂಛ್ ಸೆಕ್ಟರ್ ನಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು 12 ಮಂದಿ ನಾಗರಿಕರು ಸಾವನ್ನಪ್ಪಿದ್ದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.