ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.
ನವದೆಹಲಿಯಿಂದ ವೃಂದಾವನಕ್ಕೆ ತೆರಳುತ್ತಿದ್ದ ವೇಳೆ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಅಖಿಲ ಭಾರತೀಯ ಪ್ರಚಾರ್ ಪ್ರಮುಖ ಮನ್ಮೋಹನ್ ವೈದ್ಯ ತಿಳಿಸಿದ್ದಾರೆ.
ಇದೊಂದು ಸಣ್ಣ ಅಪಘಾತವಾಗಿದ್ದು, ಯಾರೋಬ್ಬರಿಗೂ ಗಾಯಗಳಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವೈದ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.