ಶಶಿಕಲಾ 
ದೇಶ

ಪೆರೋಲ್ ಮೇಲೆ ಶಶಿಕಲಾ ಬಿಡುಗಡೆ, ಕೈದಿ ನಂ.9234ಗೆ ವಿಧಿಸಿದ ಷರತ್ತುಗಳು ಏನು ಗೊತ್ತಾ?

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರಿಗೆ ಶುಕ್ರವಾರ ಪರಪ್ಪನ....

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರಿಗೆ ಶುಕ್ರವಾರ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಅನಾರೋಗ್ಯಪೀಡಿತ ಅವರ ಪತಿಯನ್ನು ಭೇಟಿ ಮಾಡುವುದಕ್ಕಾಗಿ ಐದು ದಿನಗಳ ಕಾಲ ಪೆರೋಲ್ ನೀಡಿದ್ದಾರೆ. ಆದರೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ ಜಯಲಲಿತಾ ಅವರ ಆಪ್ತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.
ಶಶಿಕಲಾ ಕೈದಿ ನಂ.9234 ಅಕ್ಟೋಬರ್ 7ರಿಂದ 11ರ ವರೆಗೆ ಪೆರೋಲ್ ನೀಡಲಾಗಿದ್ದು, ಈ ಐದು ದಿನಗಳ ಅವಧಿಯಲ್ಲಿ  ಪತಿಯ ಭೇಟಿಯನ್ನು ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರುವಂತೆ ಸೂಚಿಸಲಾಗಿದೆ. 
ಮನೆಯಲ್ಲಿ ಮತ್ತು ಆಸ್ಪತ್ರೆಯಲ್ಲಿ ಬೇರೆ ಯಾರನ್ನೂ ಭೇಟಿ ಮಾಡದಂತೆ ಹಾಗೂ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳದಂತೆ ಷರತ್ತು ವಿಧಿಸಲಾಗಿದೆ.
ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡದಂತೆಯೂ ಎಐಎಡಿಎಂಕೆ ನಾಯಕಿಗೆ ಸೂಚಿಸಲಾಗಿದ್ದು, ಚೆನ್ನೈ ಪೊಲೀಸರು ಶಶಿಕಲಾ ಅವರ ಮೇಲೆ ನಿಗಾವಹಿಸಲಿದ್ದಾರೆ.
ಶಶಿಕಲಾ ಅವರು ಶುಕ್ರವಾರ ಸಂಜೆ ಚೆನ್ನೈಗೆ ತೆರಳಿ ತಮ್ಮ ಪತಿಯನ್ನು ಭೇಟಿ ಮಾಡಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟರಾಜನ್‌ ಕಿಡ್ನಿ ಹಾಗೂ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!