ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಸರಯೂ ನದಿಯಲ್ಲಿ ದೋಣಿ ಮುಳುಗಿ ಆರು ಸಾವು

ಉತ್ತರ ಪ್ರದೇಶದ ಸರಯೂ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ನಾಲ್ವರು ಮಕ್ಕಳು ಸೇರಿ ಆರು ಜನ ಮೃಅತಪಟ್ಟಿದ್ದಾರೆ.

ಬಹರಾಯಿಚ್: ಉತ್ತರ ಪ್ರದೇಶದ ಸರಯೂ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ನಾಲ್ವರು ಮಕ್ಕಳು ಸೇರಿ ಆರು ಜನ ಮೃಅತಪಟ್ಟಿದ್ದಾರೆ.
ಬಹರಾಯಿಚ್ ಜಿಲ್ಲೆಯ ಬೆಹ್ತಾದಲ್ಲಿ ಸರಯೂ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು ಹತ್ತಿರದ ರಾಮ್​ಗಾಂವ್​​ಗೆ ಜಾತ್ರೆಗೆಂದು ತೆರಳಿದ್ದವರು ಹಿಂತಿರುಗುವ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಒಂಭತ್ತು ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಮೂವರು ಈಜಿ ದಡ ಸೇರಿದ್ದಾರೆ.
ಮೃಅತಪಟ್ಟವರನ್ನು ರಾಜೇಶ್​(25),ಬ್ರಿಜೇಶ್(20),ಮಗನ್​(17),ವಿಜಯ್​(16),ತಿರಿತ್​(12) ಹಾಗೂ ಶಕಿಲ್​(12) ಎಂದು ಗುರುತಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. 
ಕಳೆದ 1 ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಸಂಭವಿಸಿದ ಎರಡನೇ ದೋಣಿ ದುರಂತ ಇದಾಗಿದೆ. ಸೆ.14 ರಂದು ಯಮುನಾ ನದಿಯಲ್ಲಿ ದೋಣಿ ಮುಳುಗಿ 22 ಮಂದಿ ನೀರು ಪಾಲಾಗಿದ್ದರು. 
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.ಸಂತ್ರಸ್ತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT