ಸಾಂದರ್ಭಿಕ ಚಿತ್ರ 
ದೇಶ

ಪತಿ, ಮಗುವಿನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಉತ್ತರ ಪ್ರದೇಶದಲ್ಲಿ ಹೀನ ಕೃತ್ಯ!

ಉತ್ತರ ಪ್ರದೇಶದಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಹುಷಾರಿಲ್ಲದ ಮಗುವನ್ನು ಆಸ್ಪತ್ರೆಗೆ ಕರೆತಂದ ಮಹಿಳೆ ಮೇಲೆ ಆಕೆಯ ಪತಿ ಮತ್ತು ಮಗುವಿನ ಎದುರಲ್ಲೇ ಸಾಮೂಹಿಕ ಅತ್ಯಾಚಾರ ಗೈದಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಹುಷಾರಿಲ್ಲದ ಮಗುವನ್ನು ಆಸ್ಪತ್ರೆಗೆ ಕರೆತಂದ ಮಹಿಳೆ ಮೇಲೆ ಆಕೆಯ ಪತಿ ಮತ್ತು ಮಗುವಿನ ಎದುರಲ್ಲೇ ಸಾಮೂಹಿಕ ಅತ್ಯಾಚಾರ ಗೈದಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ಈ ಹೀನ ಕೃತ್ಯ ನಡೆದಿದ್ದು, ಮಗುವಿಗೆ ಹುಷಾರಿಲ್ಲದ ಕಾರಣ, ದಂಪತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರಿಗೆ ತೋರಿಸಿ, ಮನೆಗೆ ಬೈಕ್ ನಲ್ಲಿ ವಾಪಸ್ ಆಗುತ್ತಿದ್ದರು. ಈ  ವೇಳೆ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ದಂಪತಿಗಳನ್ನು ಅಡ್ಡಗಟ್ಟಿ, ದಂಪತಿ ಕೈಯಲ್ಲಿದ್ದ ಮಗುವನ್ನು ಕಸಿದಿದ್ದಾರೆ. ಬಳಿಕ ಮಗುವಿನ ಕುತ್ತಿಗೆಗೆ ಚಾಕು ಇಟ್ಟು, ಪತಿಯ ತಲೆಗೆ ಗನ್ ಇಟ್ಟು ಬೆದರಿಕೆ ಹಾಕಿದ್ದಾರೆ.

ಬಳಿಕ ಮಹಿಳೆಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಮಹಿಳೆಯ ಪತಿ ಆಕೆಯನ್ನು ರಕ್ಷಿಸಲು ಮುಂದಾಗಿದ್ದಾನೆಯಾದರೂ ಆತನನ್ನು ಹಿಡಿದ ದುಷ್ಕರ್ಮಿಗಳು ಹಿಗ್ಗಾಮುಗ್ಗಾ ಥಳಿಸಿದ್ದಾರೆ.  ಬಳಿಕ ವಿಚಾರ ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಅತ್ಯಾಚಾರ ಗೈದು ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಬಳಿಕ ಸ್ಥಳೀಯ ರೈತನ ನೆರವು ಪಡೆದ ದಂಪತಿಗಳು ಮುಜಾಫರ್ ನಗರ ಠಾಣೆಗೆ ಆಗಮಿಸಿ  ಪೊಲೀಸರಿಗೆ ದೂರು ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಮಹಿಳೆ ಹೇಳಿಕೆ ನೀಡಿದ್ದು, ಆಸ್ಪತ್ರೆಯಿಂದ ವಾಪಸ್ ಮನೆಗೆ ತೆರಳುವಾಗ ಕಾರಿನಲ್ಲ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ನನ್ನ ಮಗುವನ್ನು ಕಸಿದು, ಗಂಡನ ಕೈಕಾಲಿಗೆ ಹಗ್ಗವನ್ನು ಕಟ್ಟಿದರು. ಬಳಿಕ ನನ್ನನ್ನು  ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಗೈದು ಬೆದರಿಕೆ ಹಾಕಿ ಪರಾರಿಯಾದರು ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮುಜಾಫರ್ ನಗರ ಗ್ರಾಮಾಂತರ ಠಾಣೆ ಎಸ್ ಪಿ ಅಜಯ್ ಸಹದೇವ್ ಅವರು, ಸಂತ್ರಸ್ಥ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ವರದಿಗಾಗಿ  ಕಾಯುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪ್ರಸ್ತುತ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!