ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ವಿಧವೆಯ ವಿವಾಹವಾದರೆ ಮಧ್ಯ ಪ್ರದೇಶ ಸರ್ಕಾರದಿಂದ 2 ಲಕ್ಷ ಉಡುಗೊರೆ!

ಮಧ್ಯ ಪ್ರದೇಶ ಸರ್ಕಾರ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಈ ಯೋಜನೆ ಅನ್ವಯ ವಿಧವೆಯರನ್ನು ಮದುವೆಯಾಗುವವರಿಗೆ ರಾಜ್ಯ ಸರ್ಕಾರ 2 ಲಕ್ಷ ರು.ಗಳನ್ನು ಉಡುಗೊರೆಯಾಗಿ ನೀಡಲಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 8 Oct 2017, 3:49 am
ಭೋಪಾಲ್: ಮಧ್ಯ ಪ್ರದೇಶ ಸರ್ಕಾರ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಈ ಯೋಜನೆ ಅನ್ವಯ ವಿಧವೆಯರನ್ನು ಮದುವೆಯಾಗುವವರಿಗೆ ರಾಜ್ಯ ಸರ್ಕಾರ 2 ಲಕ್ಷ ರು.ಗಳನ್ನು ಉಡುಗೊರೆಯಾಗಿ ನೀಡಲಿದೆ.
ಮಧ್ಯಪ್ರದೇಶದಲ್ಲಿ ವಿಧವಾ ವಿವಾಹವನ್ನು ಪ್ರೋತ್ಸಾಹಿಸುವ ಉದ್ದೇಶಕ್ಕಾಗಿ ಶಿವರಾಜ್ ಸಿಂಗ್ ಚೌಹ್ವಾಣ್ ನೇತೃತ್ವದ ಸರ್ಕಾರ ಈ ಯೋಜನೆ ಘೋಷಣೆ ಮಾಡಿದ್ದು, ಅಲ್ಲಿನ ಸಾಮಾಜಿಕ ನ್ಯಾಯ ಇಲಾಖೆಯು 18ರಿಂದ 45ರ  ಹರೆಯದ ವಿಧವೆಯನ್ನು ವಿವಾಹವಾಗುವ  ವರನಿಗೆ ಸರ್ಕಾರದಿಂದ  2 ಲಕ್ಷ ರೂ ಉಡುಗೊರೆ ನೀಡುವುದಾಗಿ ಘೋಷಣೆ ಮಾಡಿದೆ.

ಈ ವಿನೂತನ ಯೋಜನೆ ಮೂಲಕ ಸರ್ಕಾರ ವಾರ್ಷಿಕ ಸುಮಾರು 1 ಸಾವಿರ ವಿಧವಾ ವಿವಾಹವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದೆ. ಕಳೆದ ಜುಲೈನಲ್ಲಿ ಸುಪ್ರೀಂ ಕೋರ್ಟ್ ವಿಧವಾ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸೂಕ್ತ  ಯೋಜನೆಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿತ್ತು. ಸುಪ್ರೀಂ ಕೋರ್ಟ್ ನ ಆದೇಶದಿಂದ ಪ್ರೇರಿತವಾಗಿರುವ ಮಧ್ಯಪ್ರದೇಶ ಸರ್ಕಾರ ವಿಧವಾ ವಿವಾಹವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ.  ಸರ್ಕಾರದ ಈ ಯೋಜನೆಗಾಗಿ ಪ್ರತಿವರ್ಷ 20 ಕೋಟಿ ರೂ. ಒದಗಿಸಲಿದೆ ಎಂದು ಹೇಳಲಾಗುತ್ತಿದೆ.

ಸರ್ಕಾರದ ವಿಧವಾ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದೆಯಾದರೂ  ಪ್ರಸ್ತುತ ಮಧ್ಯ ಪ್ರದೇಶ ರಾಜ್ಯದಲ್ಲಿ ಪ್ರತಿವರ್ಷ ಎಷ್ಟು ವಿಧವಾ ವಿವಾಹ ನಡೆಯುತ್ತಿದೆ ಎನ್ನುವ ಬಗ್ಗೆ  ಮಾಹಿತಿ ತಿಳಿಸಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments