ತವರಿನಲ್ಲಿ ಓದಿದ್ದ ಶಾಲೆಗೆ ಮೋದಿ ಭೇಟಿ, ಶಾಲೆಯ ಮಣ್ಣನ್ನು ತಿಲಕ ಧಾರಣೆ ಮಾಡಿದ ಪ್ರಧಾನಿ!
ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಹುಟ್ಟೂರಾದ ವಾಡ್ನಗರ್ ದಲ್ಲಿ ತಾವು ಓದಿದ್ದ ಶಾಲೆಗೆ ಭೇಟಿ ನೀಡಿದ್ದಾರೆ.
ಅಹಮದಾಬಾದ್: ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಹುಟ್ಟೂರಾದ ವಾಡ್ನಗರ್ ದಲ್ಲಿ ತಾವು ಓದಿದ್ದ ಶಾಲೆಗೆ ಭೇಟಿ ನೀಡಿದ್ದಾರೆ.
ಈ ವೇಳೆ ತಾವು ಓದಿದ ಶಾಲೆಯ ಅಂಗಳದಲ್ಲಿ ತಲೆಬಾಗಿ ನಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಂಗಳದಲ್ಲಿನ ಮಣ್ಣನ್ನು ತಿಲಕವಾಗಿ ಇಟ್ಟುಕೊಂಡಿದ್ದು ವಿಶೇಷವಾಗಿತ್ತು. ವಡ್ ನಗರದಲ್ಲಿ ಹುಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಅಲ್ಲಿಯೇ ಚಹಾ ಅಂಗಡಿಯನ್ನೂ ಸಹ ನಡೆಸುತ್ತಿದ್ದ ತಮ್ಮ ತಂದೆಯವರಿಗೆ ಸಹಾಯ ಮಾಡುತ್ತಿದ್ದರು.
ವಡ್ ನಗರದಲ್ಲಿರುವ ಶಾಲೆಗೆ ಭೇಟಿ ನೀಡುವುದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವೈದ್ಯಕೀಯ ಕಾಲೇಜನ್ನು ಉದ್ಘಾಟಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.