ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೀಪಾವಳಿ ವೇಳೆ ದೆಹಲಿಯಲ್ಲಿ ಪಟಾಕಿಗೆ ನಿಷೇಧ: ಸುಪ್ರೀಂ ಕೋರ್ಟ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿಷೇಧ ವಿಧಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 9 Oct 2017, 12:24 pm
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿಷೇಧ ವಿಧಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
ದೆಹಲಿಯಲ್ಲಿ ಮಿತಿ ಮೀರಿರುವ ವಾಯು ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಮುಂಬರುವ ನವೆಂಬರ್ 1ರ ತನಕ ಪಟಾಕಿ ಸಿಡಿಸುವುದಕ್ಕೆ ಸುಪ್ರೀಂ ಕೋರ್ಟ್ ನಿಷೇಧ ವಿಧಿಸಿದೆ. ಇದೇ ಅಕ್ಟೋಬರ್ ದೀಪಾವಳಿ ಹಬ್ಬದ  ತಿಂಗಳಾದ್ದರಿಂದ ಪಟಾಕಿ ಮಾರಾಟ ಮತ್ತು ಪಟಾಕಿ ಬಳಕೆ ಹೆಚ್ಚು ಮಾಡುವುದರಿಂದ ದೆಹಲಿಯಲ್ಲಿ ವಾಯುಮಾಲೀನ್ಯ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂ ಕೋರ್ಟ್ ಪಟಾಕಿ ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದೆ.

ದೇಶಾದ್ಯಂತ ದೀಪಾವಳಿ ಹಬ್ಬದಂದು ಪಟಾಕಿ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ವಾಯುಮಾಲೀನ್ಯ ಹೆಚ್ಚಾಗುವ ಅಪಾಯವಿದೆ. ಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಹಿಂದೆ ಅಂದರೆ ಸೆಪ್ಟೆಂಬರ್ ನಲ್ಲೂ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಪಟಾಕಿ ಬಳಕೆಯನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿತ್ತು. ಮದುವೆ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಪಟಾಕಿ ಬಳಕೆ  ಅತ್ಯಧಿಕವಾಗುವುದರಿಂದ ವಾಯುಮಾಲಿನ್ಯ ಹೆಚ್ಚುತ್ತಿದೆ. ಇದಕ್ಕಾಗಿ ದೆಹಲಿ ಮತ್ತು ದೆಹಲಿ ವಲಯದಲ್ಲಿ (ಎನ್‌ಸಿಆರ್‌) ತಕ್ಷಣದಿಂದಲೇ ಜಾರಿಗೆ ಬರುವಂತೆ ಪಟಾಕಿ ನಿಷೇಧ ಜಾರಿಗೆ ತರಲಾಗಿತ್ತು. ಅಂತೆಯೇ ಮುಂದಿನ  ಆದೇಶದವರೆಗೂ ಪಟಾಕಿ ಮಾರಾಟಗಾರರ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಸುಪ್ರೀಂ ಹೇಳಿತ್ತು.

ಇದೇ ಇದೇ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿ.ಎಸ್‌. ಠಾಕೂರ್‌ ಹಾಗೂ ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಹಾಗೂ ಎಸ್‌.ಎ. ಬಾಬ್ಡೆ ಅವರ ನ್ಯಾಯಪೀಠ "ಸಾರ್ವಜನಿಕರ ಹಿತದ ಉದ್ದೇಶದಿಂದ  ದೆಹಲಿ ಮತ್ತು ಸುತ್ತಮುತ್ತ ಪಟಾಕಿಗಳ ದಾಸ್ತಾನು ಹಾಗೂ ಮಾರಾಟ ಪರವಾನಗಿಯನ್ನು ರದ್ದು ಮಾಡಲಾಗಿದೆ" ಎಂದು ಆದೇಶ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments