ಅಮಿತ್ ಶಾ ಪುತ್ರನ ವಿರುದ್ಧದ ವರದಿ ಕುರಿತು 'ದಯವಿಟ್ಟು ಏನಾದರು ಹೇಳಿ': ಪ್ರಧಾನಿ ಮೋದಿಗೆ ರಾಹುಲ್ ಒತ್ತಾಯ
ಬಿಜೆಪಿ ಅಧ್ಯಕ್ಷ ಅಮಿತ್ ಅವರ ಪುತ್ರನ ವಿರುದ್ಧದ ಮಾಧ್ಯಮ ವರದಿ ಬಗ್ಗೆ 'ಏನಾದ್ರೂ ಮಾತನಾಡಿ' ಎಂದು ಕಾಂಗ್ರೆಸ್...
ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಅವರ ಪುತ್ರನ ವಿರುದ್ಧದ ಮಾಧ್ಯಮ ವರದಿ ಬಗ್ಗೆ 'ಏನಾದ್ರೂ ಮಾತನಾಡಿ' ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
2014ರಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಮಿತ್ ಶಾ ಪುತ್ರನ ಒಡೆತನದ ಕಂಪನಿಯ ವ್ಯವಹಾರ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂಬ ವರದಿ ಕುರಿತು ಪ್ರಧಾನಿ ಪ್ರತಿಕ್ರಿಯಿಸಲಿ. ಮೋದಿಜಿ ನೀವು ಕಾವಲುಗಾರನಾ ಅಥವಾ ಆ ಕಂಪನಿಯ ಪಾಲುದಾರನಾ?ಎಂದು ರಾಹುಲ್ ಪ್ರಶ್ನಿಸಿದ್ದಾರೆ.
ಬಿಜೆಪಿ ಅಧ್ಯಕ್ಷರ ಪುತ್ರನ ವಿರುದ್ಧದ ಮಾಧ್ಯಮ ವರದಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮಿತ್ ಶಾ ಅವರನ್ನು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಮತ್ತು ಮಾಧ್ಯಮ ವರದಿ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಒತ್ತಾಯಿಸಿದ್ದಾರೆ.
ಅಮಿತ್ ಶಾ ಪುತ್ರ ಜಯ್ ಶಾ ನಿರ್ದೇಶಕರಾಗಿರುವ ಟೆಂಪಲ್ ಎಂಟರ್ಪ್ರೈಸಸ್ನ ಆದಾಯ ಒಂದು ವರ್ಷದ ಅವಧಿಯಲ್ಲಿ 50 ಸಾವಿರದಿಂದ 80 ಕೋಟಿ ರುಪಾಯಿಗೆ ಏರಿಕೆಯಾಗಿದೆ ಎಂದು ‘ದಿ ವೈರ್’ ಸುದ್ದಿತಾಣ ವರದಿ ಮಾಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.