ರಾಜನಾಥ್ ಸಿಂಗ್ 
ದೇಶ

ಅಮಿತ್ ಶಾ ಪುತ್ರನ ವಿರುದ್ಧದ ಆರೋಪ ಆಧಾರ ರಹಿತ, ತನಿಖೆಯ ಅಗತ್ಯವಿಲ್ಲ: ರಾಜನಾಥ್

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರ ವಿರುದ್ಧದ ಆರೋಪ ಆಧಾರ ರಹಿತ ಮತ್ತು ಆ ಬಗ್ಗೆ ಯಾವುದೇ ತನಿಖೆ...

ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರ ವಿರುದ್ಧದ ಆರೋಪ ಆಧಾರ ರಹಿತ ಮತ್ತು ಆ ಬಗ್ಗೆ ಯಾವುದೇ ತನಿಖೆ ನಡೆಸುವ ಅಗತ್ಯ ಇಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ನೂತನ ಮುಖ್ಯ ಕಚೇರಿಯನ್ನು ಉದ್ಘಾಟಿಸಿದ ಬಳಿಕ ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಅಂತಹ ಆರೋಪಗಳು ಆಗಾಗ ಬರುತ್ತಿರುತ್ತವೆ ಎಂದಿದ್ದಾರೆ.
ಈ ಹಿಂದೆಯೂ ಈ ರೀತಿಯ ಆರೋಪಗಳು ಬಂದಿವೆ. ಈಗ ಮತ್ತೆ ಅದೇ ಆರೋಪಗಳನ್ನು ಮಾಡಿದ್ದು, ಅದಕ್ಕೆ ಯಾವುದೇ ಆಧಾರ ಇಲ್ಲ ಎಂದು ವರದಿಗಾರರಿಗೆ ತಿಳಿಸಿದ್ದಾರೆ.
2014ರಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಮಿತ್ ಶಾ ಅವರ ಪುತ್ರ ಜಯ್ ಶಾ ಒಡೆತನದ ಟೆಂಪಲ್‌ ಎಂಟರ್‌ಪ್ರೈಸಸ್‌ ವಹಿವಾಟು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ದಿ ವೈರ್ ಸುದ್ದಿ ಜಾಲತಾಣ ವರದಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ