ಅಮೇಥಿಯಲ್ಲಿ ಬಿಜೆಪಿ ಸಮಾವೇಶ 
ದೇಶ

ಅಮೇಥಿಗೆ ಕಾಂಗ್ರೆಸ್ ಕೊಡುಗೆ ಏನೆಂಬುದನ್ನು ತಿಳಿಸಲಿ: ರಾಹುಲ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ಬಿಜೆಪಿ ಪಕ್ಷದ ಸಕ್ರಿಯ ರಾಜಕಾರಣಕ್ಕೆ ಹೆದರಿ ರಾಹುಲ್ ಗಾಂಧಿ ಅಮೇಥಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಅಮೇಥಿ: ಬಿಜೆಪಿ ಪಕ್ಷದ ಸಕ್ರಿಯ ರಾಜಕಾರಣಕ್ಕೆ ಹೆದರಿ ರಾಹುಲ್ ಗಾಂಧಿ ಅಮೇಥಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ ಎಂದು ಬಿಜೆಪಿ ಹೇಳಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ 2 ದಿನಗಳ ಅಮೇಥಿ ಪ್ರವಾಸ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಸಿಎಂ ಯೋಗಿ ಆದಿತ್ಯಾನಾಥ್ ಪಾಲ್ಗೊಂಡಿದ್ದು, ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ಅವರ  ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗುಜರಾತ್ ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡುವ ರಾಹುಲ್ ಗಾಂಧಿ ತಮ್ಮ ಸ್ವಕ್ಷೇತ್ರ ಅಮೇಥಿಯಲ್ಲಿ  ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ 3 ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ ಅಮೇಥಿಯಲ್ಲಿ ತಮ್ಮ ಕುಟುಂಬದ ಮೂರು ತಲೆಮಾರುಗಳು ಮಾಡಿರುವ ಕೆಲಸವನ್ನು ಒಮ್ಮೆ ಹೇಳಲಿ ಎಂದು ಹೇಳಿದರು.

ಇನ್ನು ಅಮಿತ್ ಶಾ ಬಳಿಕ ಮಾತನಾಡಿದ ಸಿಎಂ ಯೋಗಿ ಆದಿತ್ಯಾನಾಥ್ ಅವರು, ಹಿಂದಿನ ಸರ್ಕಾರದಲ್ಲಿ ರೈತರು ಭೂಮಿ ಕಳೆದುಕೊಂಡರೆ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ ಈಗ ರೈತರ ಭೂಮಿ ಹೊರತಾಗಿಯೂ  ಉದ್ಯೋಗ ಸೃಷ್ಟಿ ಮಾಡಬಹುದು ಎಂದು ಪ್ರಧಾನಿ ಮೋದಿ ತೋರಿಸಿಕೊಟ್ಟಿದ್ದಾರೆ. ಅನ್ನದಾತರ ಭೂಮಿಗಳನ್ನು ಯಾವುದೇ ಸಂಸ್ಥೆಯ ಅಥವಾ ಕುಟುಂಬದ ಆಸ್ತಿಯಾಗಿ ಮಾರ್ಪಡಿಸಲು ಬಿಡುವುದಿಲ್ಲ. ಅಳಿಯ ಅಥವಾ ಭಾವನ  ಉಧ್ಯಮಕ್ಕಾಗಿ ಭೂಮಿ ನೀಡುವುದು ಈಗ ನಡೆಯುವುದಿಲ್ಲ ಎಂದು ಪರೋಕ್ಷವಾಗಿ ರಾಬರ್ಟ್ ವಾದ್ರಾ ಕುರಿತಂತೆ ವಾಗ್ದಾಳಿ ನಡೆಸಿದರು.

ಇನ್ನು ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮೇಥಿಯಲ್ಲಿ ಬಿಜೆಪಿಯ ಸಕ್ರಿಯ ರಾಜಕಾರಣದಿಂದಾಗಿ ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದಾರೆ. ಅಮೇಥಿ ಜನರಿಗೆ ನಾನು  ಮೊದಲೇ ಮಾತು ನೀಡಿದ್ದೆ. ಚುನಾವಣಾ ಸೋಲಿನ ಹೊರತಾಗಿಯೂ ನಾನು ಅಮೇಥಿಗೆ ನಿರಂತರವಾಗಿ ಭೇಟಿ ನೀಡುತ್ತೇನೆ ಎಂದು ಮತದಾರರಿಗೆ ಹೇಳಿದ್ದೆ. ಕೊಟ್ಟ ಮಾತಿನಂತೆ ನಾನು ಅಮೇಥಿಗೆ ಭೇಟಿ ನೀಡುತ್ತಿದ್ದು, ಕ್ಷೇತ್ರದ  ಜನರೊಂದಿಗೆ ಸಂಪರ್ಕದಲ್ಲಿದ್ದೇನೆ. ಇದೇ ಕಾರಣಕ್ಕೆ ರಾಹುಲ್ ಗಾಂಧಿ ಕೂಡ ಕ್ಷೇತ್ರಕ್ಕೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿಯಿಂದಾಗಿಯೇ ಗಾಂಧಿಗಳು ಈ ಹಿಂದೆಂದಿಗಿಂತಲೂ ಹೆಚ್ಚೆಚ್ಚು ಬಾರಿ ಅಮೇಥಿಗೆ ಭೇಟಿ ನೀಡುತ್ತಿದ್ದಾರೆ  ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್