ಗುಜರಾತ್ ಹಾದಿಯಲ್ಲಿ ಮಹಾರಾಷ್ಟ್ರ: ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ಕಡಿತ
ಮಹಾರಾಷ್ಟ್ರ ಸರ್ಕಾರವೂ ಗುಜರಾತ್ ಮಾದರಿಯಲ್ಲೇ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ನ್ನು ಕಡಿತಗೊಳಿಸಿದ್ದು, ಪೆಟ್ರೋಲ್ ಮೇಲಿನ ವ್ಯಾಟ್ ನ್ನು 2 ರೂಪಾಯಿ ಹಾಗೂ ಡಿಸೇಲ್ ಮೇಲಿನ ವ್ಯಾಟ್ ನ್ನು 1..
ಮುಂಬೈ: ಮಹಾರಾಷ್ಟ್ರ ಸರ್ಕಾರವೂ ಗುಜರಾತ್ ಮಾದರಿಯಲ್ಲೇ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ನ್ನು ಕಡಿತಗೊಳಿಸಿದ್ದು, ಪೆಟ್ರೋಲ್ ಮೇಲಿನ ವ್ಯಾಟ್ ನ್ನು 2 ರೂಪಾಯಿ ಹಾಗೂ ಡಿಸೇಲ್ ಮೇಲಿನ ವ್ಯಾಟ್ ನ್ನು 1 ರೂಪಾಯಿ ಕಡಿಮೆಗೊಳಿಸಿದ್ದು, ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪರಿಷ್ಕೃತ ದರ ಜಾರಿಗೆ ಬಂದ ನಂತರ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ ರೂ. 75.58 ಹಾಗೂ ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 59.55 ರೂಪಾಯಿಯಾಗಲಿದೆ. ಗುಜರಾತ್ ನಂತರ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ದರವನ್ನು ಇಳಿಕೆ ಮಾಡಿದ 2 ನೇ ರಾಜ್ಯ ಮಹಾರಾಷ್ಟ್ರವಾಗಿದೆ. ಇಂದೇ ಗುಜರಾತ್ ಸಹ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ದರವನ್ನು ಶೇ.4 ರಷ್ಟು ಇಳಿಕೆ ಮಾಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.