ನವದೆಹಲಿ: ರೈಲ್ವೆ ಹೋಟೆಲ್ ಗುತ್ತಿಗೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದೆ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರ ಪುತ್ರ ಹಾಗೂ ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಶ್ವಿ ಯಾದವ್ ಅವರು ಮಂಗಳವಾರ ಜಾರಿ ನಿರ್ದೇಶನಾಲಯ(ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಜಾರಿ ನಿರ್ದೇಶನಾಲಯ ಕೆಲವು ದಿನಗಳ ಹಿಂದೆ ತೇಜಶ್ವಿ ಯಾದವ್ ಹಾಗೂ ಅವರ ಕುಟುಂಬದ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕ್ರಿಮಿನಲ್ ಕೇಸ್ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ಹೇಳಿಕೆ ದಾಖಲಿಸಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಪ್ರಕರಣ ಸಂಬಂಧ ಈಗಾಗಲೇ ಯುಪಿಎ ಮಾಜಿ ಸಚಿವ ಪಿಸಿ ಗುಪ್ತಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದು ಇಡಿ, ನಾಳೆ ವಿಚಾರಣೆಗೆ ಹಾಜರಾಗುವಂತೆ ತೇಜಶ್ವಿ ತಾಯಿ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೂ ಸಮನ್ಸ್ ನೀಡಿದೆ.
ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದ ವೇಳೆ ಖಾಸಗಿ ಸಂಸ್ಥೆಯೊಂದಕ್ಕೆ ಎರಡು ಐಆರ್‍ಸಿಟಿಸಿ ಹೋಟೆಲ್‍ಗಳ ಗುತ್ತಿಗೆ ನಿರ್ವಹಣೆ ನೀಡಲು ಲಂಚ ರೂಪದಲ್ಲಿ ಭೂಮಿ ಪಡೆದ ಆರೋಪ ಎದುರಿಸುತ್ತಿದ್ದು, ಅವರ ಪುತ್ರ ಹಾಗೂ ಕುಟುಂಬದ ಇತರ ಸದಸ್ಯರು ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics