ಸಂಗ್ರಹ ಚಿತ್ರ 
ದೇಶ

ಬಂಡಿಪೋರದಲ್ಲಿ ಎನ್'ಕೌಂಟರ್: 2 ಯೋಧರು ಹುತಾತ್ಮ, 2 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

ಉತ್ತರ ಕಾಶ್ಮೀರದ ಹಜಿನ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಭಾರತೀಯ ಸೇನೆಪಡೆಗಳು ಇಂದು ಬೆಳಿಗ್ಗೆ ಉಗ್ರರ ವಿರುದ್ಧ ಕಾರ್ಯಾಚರಣೆಗಳಿದಿತ್ತು. 

ಈ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗಾಯಗೊಂಡಿದ್ದ ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆಗಳನ್ನು ಚುರುಕುಗೊಳಿಸಿದೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿದ್ದು, ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿಗಳು ಮುಂದುವರೆಸಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!