ಪೊಲೀಸರು 
ದೇಶ

ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ: 2 ಪೊಲೀಸ್ ಕಾನ್ಸ್‌ಟೇಬಲ್‌ ಸೇರಿ 3 ಬಂಧನ

ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುತ್ತಿರುವ ಹಿಜ್ಬುಲ್ ಮುಜಾಯಿದ್ದೀನ್ ಸಂಘಟನೆಯ ಉಗ್ರರಿಗೆ ಶಸ್ತ್ರಾಸ್ತ್ರ ಮತ್ತು ನೆರವು ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸರು...

ಶ್ರೀನಗರ: ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುತ್ತಿರುವ ಹಿಜ್ಬುಲ್ ಮುಜಾಯಿದ್ದೀನ್ ಸಂಘಟನೆಯ ಉಗ್ರರಿಗೆ ಶಸ್ತ್ರಾಸ್ತ್ರ ಮತ್ತು ನೆರವು ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಮೂವರನ್ನು ಶೋಪಿಯಾನ್ ನಲ್ಲಿ ಬಂಧಿಸಲಾಗಿದೆ. 
ಬಂಧಿತರ ಪೈಕಿ ಅದೀಲ್ ಅಹಮದ್ ನಿಗ್ರೂ ಸಹ ಒಬ್ಬನಾಗಿದ್ದು ಇತ ಉಗ್ರ ಚಟುವಟಿಕೆಯ ತಳಮಟ್ಟದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ನಿಗ್ರೂನನ್ನು ತೀವ್ರ ವಿಚಾರಣೆ ನಡೆಸಿದಾಗ ಆತ ಆಶಿಂಪೋರಾದ ಕಾನ್ಸ್ ಟೇಬಲ್ ಶಬೀರ್ ಅಹಮದ್ ಮಲೀಕ್ ನಿಂದ ಒಂದು ಎಕೆ 47 ಹಾಗೂ 40 ಸಜೀವ ಗುಂಡು ಇನ್ನೊಬ್ಬ ಕಾನ್ಸ್ ಟೇಬಲ್ ನಾಜೀರ್ ಅಹಮದ್ ನಾಜರ್ ನಿಂದ ಸಹ ಒಂದು ಎಕೆ 47 ಹಾಗೂ 40 ಸಜೀವ ಗುಂಡುಗಳನ್ನು ಪಡೆದಿರುವುದಾಗಿ ಹೇಳಿದ್ದಾನೆ. 
ಅದೀಲ್ ಅಹಮದ್ ನಿಗ್ರೂ ಹೇಳಿಕೆ ಹಿನ್ನೆಲೆಯಲ್ಲಿ ಪೊಲೀಸರು ಶಬೀರ್ ಅಹಮದ್ ಮಲೀಕ್ ಹಾಗೂ ನಾಜೀರ್ ಅಹಮದ್ ನಾಜರ್ ನನ್ನು ಬಂಧಿಸಿದ್ದಾರೆ. ಬಂಧತ ನಿಗ್ರೂನಿಂದ ಒಂದು ಎಕೆ 47 ಹಾಗೂ 20 ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. 
ಇನ್ನು ಬಂಧಿತ ಇಬ್ಬರು ಕಾನ್ಸ್ ಟೇಬಲ್ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!