ಶ್ರೀನಗರ: ಕಾಶ್ಮೀರದಲ್ಲಿ ಜಡೆ ಕತ್ತರಿಸುವ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂದು ಬುಧವಾರ ತಿಳಿದುಬಂದಿದೆ.
ದುಷ್ಕರ್ಮಿಗಳ ತಂಡವೊಂದು ಇಂದು ಬೆಳಿಗ್ಗೆ ಮಹಿಳೆಯೊಬ್ಬರ ಜಡೆಯನ್ನು ಕತ್ತರಿಸಿದ್ದರು. ಶ್ರೀನಗರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಹೆಚ್ಚಾಗುತ್ತಿದ್ದರೂ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿ ಬಟಮಲೂ ಪ್ರದೇಶದಲ್ಲಿರುವ ಸ್ಥಳೀಯರು ಪ್ರತಿಭಟನೆಗಿಳಿದಿದ್ದರು.
ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಬಳಿಕ ಪೊಲೀಸರು ಪ್ರತಿಭಟನಾ ಸ್ಥಳವನ್ನು ತೊರೆಯುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದ್ದಾರೆ. ಈ ವೇಳೆ ಕೆಲವರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಹಿಂಸಾಚಾರ ಸೃಷ್ಟಿಯಾದ ಹನ್ನಲೆಯಲ್ಲಿ ಸ್ಥಳೀಯ ಮಾರುಕಟ್ಟೆಗಳನ್ನು ಬಂದ್ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ.