ಉದ್ಧವ್ ಠಾಕ್ರೆ 
ದೇಶ

ಪಟಾಕಿ ನಿಷೇಧ ಭಾರತದಲ್ಲಿ ಹಿಂದೂ ಹಬ್ಬಗಳ ಆಚರಣೆ ಉತ್ಸಾಹವನ್ನು ನಾಶ ಮಾಡುತ್ತದೆ: ಶಿವಸೇನೆ

ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ...

ಮುಂಬೈ: ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಆದೇಶದ ಪ್ರಸ್ತುತತೆಯನ್ನು ಪ್ರಶ್ನಿಸಿದ ಶಿವಸೇನೆ, ಭಾರತದಲ್ಲಿ ಹಿಂದೂ ಹಬ್ಬಗಳ ಉತ್ಸಾಹವನ್ನು ಇದು ಕೊನೆಗಾಣಿಸುತ್ತದೆ ಎಂದು ಆರೋಪಿಸಿದೆ.
ವಾಯುಮಾಲಿನ್ಯ ಅಧಿಕವಾಗುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ಮಾರಾಟಕ್ಕೆ ಈ ವರ್ಷ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಆದರೆ ಈ ನಿಷೇಧದಿಂದ ವಾಯು ಮಾಲಿನ್ಯದ ಮೇಲೆ ಯಾವ ರೀತಿ ಮತ್ತು ಎಷ್ಟು ಪರಿಣಾಮ ಬೀರಬಹುದು ಎಂಬುದು ಗೊತ್ತಿಲ್ಲ ಎಂದು ಶಿವ ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.
ಪಟಾಕಿ ಮಾರಾಟವನ್ನು ನಂಬಿಕೊಂಡು ಬದುಕುತ್ತಿರುವ ಪಟಾಕಿ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ ಪಟಾಕಿ ಮಾರಾಟ ನಿಷೇಧ ಪರಿಣಾಮ ಬೀರಿ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಪಟಾಕಿ ಮಾರಾಟ ನಿಷೇಧಿಸುವ ಮುನ್ನ ಅದನ್ನು ನಂಬಿಕೊಂಡು ಬದುಕುತ್ತಿರುವ ಕುಟುಂಬಗಳಿಗೆ ಪರ್ಯಾಯ ಜೀವನೋಪಾಯ ಕಲ್ಪಿಸಲಾಗಿದೆಯೇ ಎಂದು ಸಾಮ್ನಾದಲ್ಲಿ ಪ್ರಶ್ನಿಸಲಾಗಿದೆ.
ಅಧಿಕಾರಿಗಳು ಪಟಾಕಿ ತಯಾರಕರು ಮತ್ತು ಮಾರಾಟಗಾರರಿಗೆ ಪರ್ಯಾಯ ಜೀವನ ವ್ಯವಸ್ಥೆ ಕಲ್ಪಿಸಿದೆಯೇ ಅಥವಾ ರೈತರಂತೆ ಅವರು ಕೂಡ ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ಶಿವಸೇನೆ ಖಾರವಾಗಿ ಪ್ರಶ್ನಿಸಿದೆ.
ಪಟಾಕಿಗಳನ್ನು ನಿಷೇಧಿಸಿದರೆ ಬೆಳಕಿನ ಹಬ್ಬ ದೀಪಾವಳಿಯ ಶಾಂತಿಗೆ ಅಡ್ಡಿಪಡಿಸಿದಂತೆ ಆಗುತ್ತದೆ. ಇದರಿಂದ ವಾಯುಮಾಲಿನ್ಯ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದರೂ ಕೂಡ ಮುಂಬೈ ನಗರದ ಚರಂಡಿಗಳಲ್ಲಿ ಇನ್ನು ಕೂಡ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಾಣುತ್ತೇವೆ ಎಂದಿದೆ.
ಪ್ರಧಾನಿ ಮೋದಿಯವರ ಅನಾಣ್ಯೀಕರಣ ಕ್ರಮವನ್ನು ಟೀಕಿಸಿದ ಶಿವಸೇನೆ, ಮೋದಿಯವರ ನೋಟು ನಿಷೇಧ ದೇಶದ ಜನತೆಗೆ ಆಘಾತವನ್ನುಂಟುಮಾಡಿತ್ತು. ನೋಟುಗಳ ಅಮಾನ್ಯತೆ ಹರಡಿರುವ ಮಾಲಿನ್ಯದ ಹೊರೆಯನ್ನು ಭಾರತದ ಜನತೆ ಹೊರಬೇಕಾಗಿದೆ ಎಂದು ಟೀಕಿಸಿದೆ.
ಶಾಸಕಾಂಗ ಮತ್ತು ನ್ಯಾಯಾಂಗ ದೇಶದ ಜನತೆಗೆ ಮೂಲಭೂತ ಸೌಕರ್ಯ ಒದಗಿಸದಿದ್ದರೆ ಸಂಪ್ರದಾಯ, ಆಚರಣೆಗಳನ್ನು ನಿಷೇಧಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದೆ.
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಕಳೆದ ಸೋಮವಾರ ಸುಪ್ರೀಂ ಕೋರ್ಟ್ ನಿಷೇಧ ಹೇರಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT