ನಾಂದೇಡ್ ಮುನಿಸಿಪಲ್ ಚುನಾವಣೆ: 'ಕೈ'ಗೆ ಭರ್ಜರಿ ಗೆಲುವು, ಬಿಜೆಪಿ ದಿಗ್ವಿಜಯಕ್ಕೆ ಬ್ರೇಕ್
ಮಹಾರಾಷ್ಟ್ರದ ನಾಂದೇಡ್ - ವಘಾಲಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ದಿಗ್ವಿಜಯಕ್ಕೆ ಬ್ರೇಕ್ ಹಾಕಿದೆ....
ಮುಂಬೈ: ಮಹಾರಾಷ್ಟ್ರದ ನಾಂದೇಡ್ - ವಘಾಲಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ದಿಗ್ವಿಜಯಕ್ಕೆ ಬ್ರೇಕ್ ಹಾಕಿದೆ.
ನಾಂದೇಡ್ ಮಹಾನಗರ ಪಾಲಿಕೆಯ ಒಟ್ಟು 81 ಸೀಟುಗಳ ಪೈಕಿ ಈ ವರೆಗೆ ಫಲಿತಾಂಶ ಘೋಷಿಸಲ್ಪಟ್ಟ 54 ಸೀಟುಗಳಲ್ಲಿ 49 ಸೀಟುಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಇನ್ನು ಬಿಜೆಪಿ ಕೇವಲ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಶಿವಸೇನೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚವಾಣ್ ಅವರ ತವರಾಗಿರುವ ನಾಂದೇಡ್ನಲ್ಲಿ ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿತ್ತು. ಇಲ್ಲಿನ ಪೌರಾಡಳಿತೆಯ ಮೇಲೆ ಪೂರ್ತಿ ನಿಯಂತ್ರಣ ಸಾಧಿಸಲು ಬಿಜೆಪಿ ಶತಾಯ ಗತಾಯ ಯತ್ನಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.