ಮುಕುಲ್ ರಾಯ್ 
ದೇಶ

ನಾನು ಮಮತಾ ಬ್ಯಾನರ್ಜಿ ಸೇವಕನಲ್ಲ: ಮುಕುಲ್ ರಾಯ್

ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಮುಕುಲ್ ರಾಯ್ ಅವರು ಬುಧವಾರ ಪಕ್ಷ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ...

ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಮುಕುಲ್ ರಾಯ್ ಅವರು ಬುಧವಾರ ಪಕ್ಷ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 
ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ಅವರು ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. 
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪಕ್ಷದಲ್ಲಿ ನಾವು ಸಂಗಾತಿಗಳಾಗಿರಬೇಕು. ಸೇವಕರಲ್ಲ. ನಾನು ಮಮತಾ ಬ್ಯಾನರ್ಜಿಯವರ ಸೇವಕನಲ್ಲ. ಏಕವ್ಯಕ್ತಿ ಪಕ್ಷ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಬಳಿಕ ಬಿಜೆಪಿ ಸೇರುವ ಕುರಿತಂತೆ ಉಂಟಾಗಿರುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 1998ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಜತೆ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳುವ ಸಂದರ್ಭದಲ್ಲಿ ಟಿಎಂಸಿ ನಾಯಕತ್ವ ಬಿಜೆಪಿ ಕೋಮುವಾದಿ ಪಕ್ಷವಲ್ಲ ಎಂದು ಹೇಳಿತ್ತು ಎಂದು ನೆನಪಿಸಿದ್ದಾರೆ. 
ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಮುಕುಲ್ ರಾಯ್ ಅವರನ್ನು ಸೆ.25 ರಂದು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!