ಆರ್ ಎಸ್ಎಸ್ 
ದೇಶ

ಚಡ್ಡಿ ಧರಿಸಿರುವ ಮಹಿಳೆಯರನ್ನು ನೋಡಬೇಕೆಂದರೆ ಮಹಿಳಾ ಹಾಕಿ ವೀಕ್ಷಿಸಿ: ರಾಹುಲ್ ಗೆ ಆರ್ ಎಸ್ ಎಸ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳಲ್ಲಿ ಚಡ್ಡಿ ಧರಿಸಿದ ಮಹಿಳೆಯರನ್ನು ನೋಡಿದ್ದೀರಾ? ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರತಿಕ್ರಿಯೆ ನೀಡಿದ್ದು, ರಾಹುಲ್ ಗಾಂಧಿಯವರು ಚಡ್ಡಿ ಧರಿಸಿರುವ ಮಹಿಳೆಯರನ್ನು ನೋಡಬೇಕೆಂದರೆ ಹಾಕಿ ಪಂದ್ಯಾಗಳನ್ನು ವೀಕ್ಷಿಸಲಿ

ಭೋಪಾಲ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳಲ್ಲಿ ಚಡ್ಡಿ ಧರಿಸಿದ ಮಹಿಳೆಯರನ್ನು ನೋಡಿದ್ದೀರಾ? ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರತಿಕ್ರಿಯೆ ನೀಡಿದ್ದು, ರಾಹುಲ್ ಗಾಂಧಿಯವರು ಚಡ್ಡಿ ಧರಿಸಿರುವ ಮಹಿಳೆಯರನ್ನು ನೋಡಬೇಕೆಂದರೆ ಹಾಕಿ ಪಂದ್ಯಾಗಳನ್ನು ವೀಕ್ಷಿಸಲಿ ಎಂದು ಹೇಳಿದೆ. 
ರಾಹುಲ್ ಗಾಂಧಿಯವರು ತಪ್ಪಾದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ಸಂಘದ ಹಿರಿಯ ಮುಖಂಡ ಮನ್ ಮೋಹನ್ ವೈದ್ಯ ಹೇಳಿದ್ದಾರೆ. ರಾಹುಲ್ ಗಾಂಧಿಯ ಭಾಷಣವನ್ನು ತಯಾರು ಮಾಡುವವರು ಸಂಘವನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ರಾಹುಲ್ ಗಾಂಧಿಯವರು ತಮ್ಮ ಭಾಷಣವನ್ನು ಸಿದ್ಧಪಡಿಸುವುದಕ್ಕೆ ಹೆಚ್ಚು ಬುದ್ಧಿವಂತ ಬರಹಗಾರರನ್ನು ಹೊಂದಬೇಕು ಎಂದು ವೈದ್ಯ ಸಲಹೆ ನೀಡಿದ್ದಾರೆ. 
ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಆರ್ ಎಸ್ಎಸ್ ಶಾಖೆಗಳಲ್ಲಿ ಚಡ್ಡಿ ಧರಿಸಿದ ಮಹಿಳೆಯರನ್ನು ನೋಡಿದ್ದೀರಾ? ಎಂದು ಪ್ರಶ್ನಿಸಿದ್ದರು, ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹ ಅಸಮಾಧಾನ ವ್ಯಕ್ತಪಡಿಸಿ ಒಂದು ವೇಳೆ ಭಾರತದಲ್ಲಿ ಮಹಿಳೆಯಾಗಿ ಚಡ್ಡಿ ತೊಡುವುದು ಸಬಲೀಕರಣದ ಲಕ್ಷಣ ಎಂದು ರಾಹುಲ್ ಗಾಂಧಿ ನಂಬಿದ್ದರೆ, ನಾನು ಅದಕ್ಕೆ ವಿರುದ್ಧವಾಗಿದ್ದೇನೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ