ಮುಂಬೈ: ವೈದ್ಯರ ಸಮಿತಿಯ ವರದಿಯನ್ನು ಆಧರಿಸಿ 16 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಬಾಂಬೆ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಬಾಲಕಿ ಈಗಾಗಲೇ 27 ವಾರಗಳ ಗರ್ಭಿಣಿಯಾಗಿದ್ದು, ಈ ಸಂದರ್ಭದಲ್ಲಿ ಗರ್ಭಪಾತ ಮಾಡಿದ್ರೆ ಬಾಲಕಿಯ ಜೀವಕ್ಕೆ ಅಪಾಯವಿದೆ ಎಂದು ಕೆಇಎಂ ಆಸ್ಪತ್ರೆಯ ಮತ್ತು ಜಿಎಸ್ ವೈದ್ಯಕೀಯ ಕಾಲೇಜು ವೈದ್ಯರ ಸಮಿತಿ ನೀಡಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ರಂಜಿತ್ ಮೊರೆ ಅವರು ಗರ್ಭಪಾತಕ್ಕೆ ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ನಿನ್ನೆಯಷ್ಟೇ ಎಂಟು ವೈದ್ಯರ ತಂಡ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿತ್ತು.
ಇದೇ ವರ್ಷ ಆಗಸ್ಟ್ ನಲ್ಲಿ ಥಾಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ಸ್ಥಳೀಯ ಡೆಲಿವೆರಿ ಹುಡುಗನೊಬ್ಬ ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.