ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು

ಉತ್ತರ ಪ್ರದೇಶದ ಅಲಿಘರ್ ನ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ತಾಯಿ ಮಗಳು ಸಾವನ್ನಪ್ಪಿದ್ದು ಐವರು..

ಲಕ್ನೋ: ಉತ್ತರ ಪ್ರದೇಶದ ಅಲಿಘರ್ ನ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ತಾಯಿ ಮಗಳು ಸಾವನ್ನಪ್ಪಿದ್ದು ಐವರು ಗಾಯಗೊಂಡಿದ್ದಾರೆ.
ಹರ್ದುಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ  ಜಲಾಲಿ ಎಂಬ ಪ್ರದೇಶದಲ್ಲಿರುವ ರಫೀಕ್ ಎಂಬ ಪಟಾಕಿ ಮಾರಾಟಗಾರನ ಮನೆಯಲ್ಲಿ ಸ್ಫೋಟ ಸಂಭವಿಸಿದೆ. 
ಅಫ್ಸಾರಿ(35) ಮತ್ತು ತಾಯಬ್ಬ(15) ಮೃತ ದುರ್ದೈವಿಗಳು. ರಫೀಕ್ ಲೈಸೆನ್ಸ್ ಹೊಂದಿರುವ ಪಟಾಕಿ ಮಾರಾಟಗಾರನಾಗಿದ್ದಾನೆ. ಆದರೆ ಮನೆಯಲ್ಲಿ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅಲಿಘರ್ ನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ಕೈಗೊಂಡರು. ಎರಡು ಶವಗಳನ್ನು ಮನೆಯಿಂದ ಹೊರ ತೆಗೆಯಲಾಗಿದೆ. ಗಾಯಗೊಂಡ ಅವರನ್ನು ಅಲಿಘಡ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ದೀಪಾವಳಿ ಆರಂಭಕ್ಕೂ ಮುನ್ನ ನಡೆದ ಮೂರನೇ ದುರ್ಘಟನೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!