ಮಹಾರಾಷ್ಟ್ರ: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸದ 4,500 ವೈದ್ಯರ ನೋಂದಣಿ ರದ್ದು 
ದೇಶ

ಮಹಾರಾಷ್ಟ್ರ: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸದ 4,500 ವೈದ್ಯರ ನೋಂದಣಿ ರದ್ದು

ಒಂದು ವರ್ಷ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೆಂಬ ಕಡ್ಡಾಯ ನಿಯಮವನ್ನು ಪಾಲಿಸದ 4,500 ವೈದ್ಯರ ನೋಂದಣಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ.

ಮುಂಬೈ: ಒಂದು ವರ್ಷ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೆಂಬ ಕಡ್ಡಾಯ ನಿಯಮವನ್ನು ಪಾಲಿಸದ 4,500 ವೈದ್ಯರ ನೋಂದಣಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. 
ಡಿಎಂಇಆರ್ ಅಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸದ್ದಕ್ಕೆ ಪಾವತಿ ಮಾಡಬೇಕಿದ್ದ ದಂಡವನ್ನೂ ಸಹ ಈ 4,500 ವೈದ್ಯರು ಪಾವತಿಸಿಲ್ಲ ಎಂದು ಡಿಎಂಇಆರ್ ಹೇಳಿದೆ. 2005-2012 ರ ಅವಧಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಂದ ಪದವಿ ಪೂರ್ಣಗೊಳಿಸಿದ್ದ 4,548 ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ಸೇವೆಯನ್ನೂ ಸಲ್ಲಿಸದೇ, ಅದಕ್ಕಾಗಿ ತೆರಬೇಕಾಗಿದ್ದ ದಂಡವನ್ನೂ ಪಾವತಿ ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ನಿಯಮವನ್ನು ಪಾಲನೆ ಮಾಡದೇ ಇದ್ದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿದವರು 10 ಲಕ್ಷ, ಸ್ನಾತಕೋತ್ತರ ಪದವಿ ಪಡೆದವರು 50 ಲಕ್ಷ, ಹಾಗೂ ಸೂಪರ್ ಸ್ಪೆಷಾಲಿಟಿ ವೈದ್ಯರು 2 ಕೋಟಿ ರೂಪಾಯಿಗಳನ್ನು ದಂಡದ ರೂಪದಲ್ಲಿ ಪಾವತಿ ಮಾಡಬೇಕೆಂಬ ಷರತ್ತು ವಿಧಿಸಲಾಗಿದೆ ಎಂದು ಡಿಎಂಇಆರ್ ಮುಖ್ಯಸ್ಥ ಡಾ.ಪ್ರವೀಣ್ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಅಥವಾ ದಂಡ ಪಾವತಿಸುವುದರ ನಡುವೆ ಆಯ್ಕೆ ಮಾಡಿಕೊಳ್ಳಲು ಈ 4,500 ವೈದ್ಯರಿಗೆ ಸಾಕಷ್ಟು ಸಮಯ ನೀಡಿದ್ದೆವು. ಆದಾಗ್ಯೂ ನಿಯಮ ಪಾಲನೆ ಮಾಡದ ಹಿನ್ನೆಲೆಯಲ್ಲಿ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ಡಿಎಂಇಆರ್ ಮುಖ್ಯಸ್ಥರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!