ರಾಜೇಶ್ ತಲ್ವಾರ್ ದಂಪತಿ 
ದೇಶ

ಆರುಷಿ ಕೇಸ್ ನಲ್ಲಿ ತಲ್ವಾರ್‌ ದಂಪತಿ ಖುಲಾಸೆ: ಹಾಗಿದ್ದರೇ ಕೊಂದವರ್ಯಾರು, ಟ್ವಿಟ್ಟರಿಗರ ಪ್ರಶ್ನೆ?

ಶದಾದ್ಯಂತ ಸಂಚಲನ ಸೃಷ್ಟಿಸಿದ್ದ 2008 ರಲ್ಲಿ ನೊಯಿಡಾದಲ್ಲಿ ನಡೆದಿದ್ದ ಆರುಷಿ–ಹೇಮರಾಜ್‌ ಕೊಲೆ ಪ್ರಕರಣದಲ್ಲಿ ಆರುಷಿ ಪೋಷಕರಾದ ರಾಜೇಶ್‌ ತಲ್ವಾರ್‌ ...

ನವದೆಹಲಿ: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ 2008 ರಲ್ಲಿ  ನೊಯಿಡಾದಲ್ಲಿ ನಡೆದಿದ್ದ ಆರುಷಿ–ಹೇಮರಾಜ್‌  ಕೊಲೆ ಪ್ರಕರಣದಲ್ಲಿ ಆರುಷಿ ಪೋಷಕರಾದ ರಾಜೇಶ್‌ ತಲ್ವಾರ್‌ ಮತ್ತು ನೂಪುರ್‌ ತಲ್ವಾರ್‌ ಅವರನ್ನು ಅಲಹಾಬಾದ್‌ ಹೈಕೋರ್ಟ್‌ ಗುರುವಾರ ಖುಲಾಸೆಗೊಳಿಸಿದೆ. ಇದರ ಬೆನ್ನಲ್ಲೇ ಹಲವು ಪ್ರಶ್ನೆಗಳು ಎದ್ದಿವೆ. 
ತಲ್ವಾರ್ ದಂಪತಿ ನಿರಪರಾಧಿಗಳು ಎಂದಾದರೇ ಆರುಷಿ ಮತ್ತು ಹೇಮರಾಜ್ ಅವರನ್ನು ಕೊಂದಿದ್ದು ಯಾರು ಎಂದು ಟ್ಟಿಟ್ಟರ್ ನಲ್ಲಿ ಹಲವರು ಪ್ರಶ್ನಿಸಿದ್ದಾರೆ. 
ಆರುಷಿ ಕೊಂದವರು ಯಾರು ಎಂಬುದು ಗೊತ್ತಾಗಲಿಲ್ಲ, ಬಹುಶಃ ಗೊತ್ತಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಟ್ಟೀಟ್ ಮಾಡಿದ್ದಾರೆ. 
ಕೇವಲ ಅನುಮಾನದ ಆಧಾರದಲ್ಲಿ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಲು ಸಾಧ್ಯವಿಲ್ಲ.ಆರುಷಿ ಪೋಷಕರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲ ಮತ್ತು ಲಭ್ಯವಿರುವ ಸಾಂದರ್ಭಿಕ ಸಾಕ್ಷ್ಯಗಳು ಆರೋಪವನ್ನು ಸಾಬೀತು ಮಾಡುವಲ್ಲಿ ವಿಫಲವಾಗಿವೆ ಎಂದು ಹೇಳಿರುವ ನ್ಯಾಯ ಪೀಠದ ಆದೇಶವನ್ನು ಕಬೀರ್ ಬೇಡಿ ಪ್ರಶಂಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು