ಹೈದರಾಬಾದ್: ಭಾರತೀಯ ಜನತಾ ಪಕ್ಷ(ಬಿಜೆಪಿ) ಸಂಸದ ವರುಣ್ ಗಾಂಧಿ ಚುನಾವಣಾ ಆಯೋಗವು ಹಲ್ಲಿಲ್ಲದ ಹುಲಿ ಎಂದು ಕಿಡಿಕಾರಿದ್ದಾರೆ.
ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕಾಗಿ ಭಾರೀ ಪ್ರಮಾಣದಲ್ಲಿ ಹಣವನ್ನು ಖರ್ಚು ಮಾಡುತ್ತಿವೆ. ಇದು ಜಗಜ್ಜಾಹೀರ್ ಆದರೂ ನಿಗದಿತ ಸಮಯದೊಳಗೆ ಚುನಾವಣಾ ಖರ್ಚು ವೆಚ್ಚಗಳ ವಿವರಗಳನ್ನು ಸಲ್ಲಿಸದಿರುವ ಯಾವೊಂದು ರಾಜಕೀಯ ಪಕ್ಷವನ್ನು ಕೂಡ ಚುನಾವಣಾ ಆಯೋಗ ಅಮಾನ್ಯಗೊಳಿಸಿಲ್ಲ ಎಂದು ಆಯೋಗದ ವಿರುದ್ಧ ಕಿಡಿಕಾರಿದ್ದಾರೆ.
ರಾಜಕೀಯ ಪಕ್ಷಗಳು ಭಾರೀ ಪ್ರಮಾಣದಲ್ಲಿ ಹಣ ಖರ್ಚು ಮಾಡುತ್ತಿರುವುದರಿಂದ ಹಣಬಲ ಇಲ್ಲದ ಸಾಮಾನ್ಯ ವರ್ಗದ ಜನರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಕನಸಿನ ಮಾತಾಗಿದೆ ಎಂದು ವರುಣ್ ಗಾಂಧಿ ಹೇಳಿದರು.
ಚುನಾವಣಾ ಆಯೋಗ ಎರಡು ದಿನಗಳ ಹಿಂದೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿತ್ತು. ಆದರೆ ಗುಜರಾತ್ ದಿನಾಂಕ ಪ್ರಕಟಿಸದಿರುವುದನ್ನು ಕಾಂಗ್ರೆಸ್ ಬಲವಾಗಿ ಟೀಕಿಸಿತ್ತು. ಈ ಹಿನ್ನೆಲೆಯಲ್ಲಿ ವರುಣ್ ಗಾಂಧಿ ಅವರಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics