ವಿದ್ಯಾರ್ಥಿ ಉಚ್ಚಾಟನೆಗೆ ಎಫ್ಐಆರ್ ಕಾರಣವಾಗಬಾರದು: ಬಾಂಬೆ ಹೈಕೋರ್ಟ್
ಎಫ್ಐಆರ್ ದಾಖಲಾಗಿದೆ ಎಂಬ ಕಾರಣಕ್ಕೆ ಕಂಪ್ಯೂಟರ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಉಚ್ಚಾಟಿಸಿದ್ದ ಕಾಲೇಜ್ ಆದೇಶವನ್ನು....
ಮುಂಬೈ: ಎಫ್ಐಆರ್ ದಾಖಲಾಗಿದೆ ಎಂಬ ಕಾರಣಕ್ಕೆ ಕಂಪ್ಯೂಟರ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಉಚ್ಚಾಟಿಸಿದ್ದ ಕಾಲೇಜ್ ಆದೇಶವನ್ನು ಬಾಂಬೆ ಹೈಕೋರ್ಟ್ ಶನಿವಾರ ರದ್ದುಗೊಳಿಸಿದ್ದು. ಎಫ್ಐಆರ್ ನಲ್ಲಿರುವುದೇಲ್ಲ ಸತ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಮತ್ತು ಹೊರಹಾಕಲು ಇದು ಕಾರಣವಾಗಬಾರದು ಎಂದು ಹೇಳಿದೆ.
ಮುಕೇಶ್ ಪಟೇಲ್ ಸ್ಕೂಲ್ ಆಫ್ ಟೆಕ್ನೋಲೊಜಿ ಮ್ಯಾನೇಜ್ ಮೆಂಟ್ ಆಂಡ್ ಇಂಜಿನಿಯರಿಂಗ್ ಕಾಲೇಜ್ ಆಗಸ್ಟ್ 5ರಂದು 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಕಾಲೇಜ್ ನಿಂದ ಉಚ್ಚಾಟಿಸಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕಾಲೇಜ್ ಆದೇಶವನ್ನು ರದ್ದುಗೊಳಿಸಿದೆ.
ಕಳೆದ ಜೂನ್ ನಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಮತ್ತು ಮೋಸ ಮಾಡಿದ ಆರೋಪದ ಮೇಲೆ ಇಂಜಿನಿಯರಿಂಗ್ ವಿದ್ಯಾರ್ಥಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಕಾಲೇಜ್ ನಿಂದ ಹೊರ ಹಾಕಲಾಗಿತ್ತು.