ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ, ಬಿಜೆಪಿ ಸೇರಿದ ಸಚಿವ
ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಸಚಿವ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಶಿಮ್ಲಾ: ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಸಚಿವ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಾಜಿ ಟೆಲಿಕಾಂ ಸಚಿವ ಸುಖ್ ರಾಮ್ ಅವರ ಪುತ್ರ ಅನಿಲ್ ಶರ್ಮಾ ವೀರಭದ್ರ ಸಿಂಗ್ ಸಚಿವ ಸಂಪುಟದಲ್ಲಿ ಸಚಿವರಾಗಿದ್ದು ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶರ್ಮಾ ಸೇರ್ಪಡೆ ಬಗ್ಗೆ ನವದೆಹಲಿಯಲ್ಲಿ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಬಿಜೆಪಿ ವಕ್ತಾರ ಗಣೇಶ್ ದತ್ ತಿಳಿಸಿದ್ದಾರೆ.
ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಆಸಕ್ತಿ ತೋರದೇ ಇರುವುದರಿಂದ ನಾನು ಸರ್ಕಾರ ಹಾಗೂ ಪಕ್ಷ ಎರಡನ್ನೂ ತೊರೆದಿದ್ದೇನೆ ಎಂದು ಮಾಧ್ಯಮಗಳಿಗೆ ಶರ್ಮಾ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.